ಗುರುವಾರ , ಆಗಸ್ಟ್ 11, 2022
23 °C

ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯ; ಆಸ್ಟ್ರೇಲಿಯಾ ತಂಡಕ್ಕೆ ಹೆನ್ರಿಕ್ಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಸಿಡ್ನಿ: ಆಲ್‌ರೌಂಡರ್‌ ಮೊಯಿ ಸೆಸ್‌ ಹೆನ್ರಿಕ್ಸ್ ಅವರನ್ನು ಭಾರತ ವಿರುದ್ಧ ಮೊದಲ ಕ್ರಿಕೆಟ್‌ ಟೆಸ್ಟ್ ಪಂದ್ಯದಲ್ಲಿ ಆಡುವ ಆಸ್ಟ್ರೇಲಿಯಾ ತಂಡಕ್ಕೆ ಸೋಮವಾರ ಸೇರ್ಪಡೆಗೊಳಿಸಲಾಗಿದೆ. ಮೀನಖಂಡದ ನೋನಿಂದಾಗಿ ವೇಗಿ ಸೀನ್‌ ಅಬಾಟ್‌ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಮೊದಲ ಟೆಸ್ಟ್ ಹಗಲು–ರಾತ್ರಿಯದ್ದಾಗಿದ್ದು, ಇದೇ 17ರಂದು ಅಡಿಲೇಡ್‌ನಲ್ಲಿ ಆರಂಭವಾಗಲಿದೆ. ಹೆನ್ರಿಕ್ಸ್ ಸ್ನಾಯರಜ್ಜು ಬಾಧೆಯಿಂದ ಭಾರತ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಆಡಿರಲಿಲ್ಲ. ದೈಹಿಕ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಅವರನ್ನು ಆಯ್ಕೆ ಮಾಡಲಾಯಿತು. 4 ವರ್ಷಗಳ ನಂತರ ಅವರು ಟೆಸ್ಟ್‌ ತಂಡಕ್ಕೆ ಮರಳುತ್ತಿದ್ದಾರೆ. ಆದರೆ ಭಾರತ ವಿರುದ್ಧ ಇತ್ತೀಚಿನ ಏಕದಿನ ಸರಣಿಯಲ್ಲಿ ಅವಕಾಶ ಪಡೆದಿದ್ದರು.

‘ಹೆನ್ರಿಕ್ಸ್‌ ಅವರನ್ನು ಭಾರತ ವಿರು ದ್ಧದ ಮೊದಲ ಟೆಸ್ಟ್‌ಗೆ ಆಯ್ಕೆ ಮಾಡ ಲಾಗಿದೆ‘ ಎಂದು ಕ್ರಿಕೆಟ್‌ ವೆಬ್‌ಸೈಟ್‌ ಕ್ರಿಕೆಟ್‌.ಕಾಮ್‌.ಯು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು