ಗುರುವಾರ , ಡಿಸೆಂಬರ್ 2, 2021
19 °C

IND v NZ Test: ಪದಾರ್ಪಣೆ ಪಂದ್ಯದಲ್ಲೇ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕಾನ್ಪುರ: ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್‌ ಇಂಡಿಯಾದ ಯುವ ಆಟಗಾರ ಶ್ರೇಯಸ್‌ ಅಯ್ಯರ್‌ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಅವರ ಪದಾರ್ಪಣೆ ಪಂದ್ಯವಾಗಿದೆ.

ಶುಕ್ರವಾರ ಎರಡನೇ ದಿನದಾಟ ಆರಂಭಿಸಿದ ಶ್ರೇಯಸ್‌ ಅಯ್ಯರ್‌ (105), ರವೀಂದ್ರ ಜಡೇಜಾ (50), ಜೋಡಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಆಡಲಿಲ್ಲ. ಇವರಿಬ್ಬರ ವಿಕೆಟ್‌ ಪಡೆಯುವಲ್ಲಿ ಟಿಮ್ ಸೌಥಿ ಯಶಸ್ವಿಯಾದರು.

ಗುರುವಾರ ಮೊದಲ ದಿನದಾಟದ ಅಂತ್ಯಕ್ಕೆ ಭಾರತ 4 ವಿಕೆಟ್‌ ಕಳೆದುಕೊಂಡು 258 ರನ್ ಗಳಿಸಿತ್ತು. ಅಯ್ಯರ್‌ –ಜಡೇಜಾ 113 ರನ್‌ಗಳ ಜೊತೆಯಾಟವಾಡಿದ್ದರು.

ಸದ್ಯ ಬ್ಯಾಟಿಂಗ್‌ ಮುಂದುವರಿಸಿರುವ ಭಾರತ 106 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 328 ರನ್‌ ಗಳಿಸಿದೆ. ಆರ್. ಅಶ್ವಿನ್‌ ಔಟಾಗದೆ 31, ಉಮೇಶ್ ಯಾದವ್ ಕ್ರಿಸ್‌ನಲ್ಲಿದ್ದಾರೆ.

ನಾಯಕ ವಿರಾಟ್ ಕೊಹ್ಲಿ, ಅನುಭವಿ ರೋಹಿತ್ ಶರ್ಮಾ ಮತ್ತು ಗಾಯಾಳು ಕೆ.ಎಲ್. ರಾಹುಲ್ ಈ ಪಂದ್ಯದಲ್ಲಿ ಕಣಕ್ಕಿಳಿದಿಲ್ಲ. ಕೊಹ್ಲಿ ಜಾಗದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದ ಅಯ್ಯರ್, ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು