ಲಖನೌ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಕ್ರಿಕೆಟ್ ಪಂದ್ಯದ ಆರಂಭ ಮಳೆಯ ಕಾರಣ ವಿಳಂಬವಾಗಲಿದೆ. ಲಖನೌದಲ್ಲಿ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ಪಂದ್ಯವು ಅರ್ಧ ಗಂಟೆ ವಿಳಂಬವಾಗಿ ಪ್ರಾರಂಭವಾಗಲಿದೆ.

ಈ ಹಿಂದೆ 1 ಗಂಟೆಗೆ ಟಾಸ್ ಆಗಿ 1.30ಕ್ಕೆ ಪಂದ್ಯ ಆರಂಭಕ್ಕೆ ಸಮಯ ನಿಗದಿಪಡಿಸಲಾಗಿತ್ತು. ಆದರೆ, ಈಗ 1.30ಕ್ಕೆ ಟಾಸ್ ಮತ್ತು 2 ಗಂಟೆಗೆ ಪಂದ್ಯದ ಆರಂಭಕ್ಕೆ ನಿಗದಿ ಮಾಡಲಾಗಿದೆ ಎಂದು ಬಿಸಿಸಿಐ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಗುರುವಾರ ಬೆಳಿಗ್ಗೆ ಮೈದಾನದಲ್ಲಿ ಪರಿಶೀಲನೆ ನಡೆಸಿದ ಅಂಪೈರ್ಗಳು ಪಂದ್ಯದ ಸಮಯವನ್ನು ಮುಂದೂಡುವ ನಿರ್ಧಾರಕ್ಕೆ ಬಂದರು

ಈ ಪಂದ್ಯದ ಬಳಿಕ ಉಭಯ ತಂಡಗಳು ಅಕ್ಟೋಬರ್ 9ರಂದು ನಡೆಯಲಿರುವ ಎರಡನೇ ಏಕದಿನ ಪಂದ್ಯಕ್ಕಾಗಿ ರಾಂಚಿಗೆ ತೆರಳಲಿವೆ. ಅಕ್ಟೋಬರ್ 11ರಂದು ನವದೆಹಲಿಯಲ್ಲಿ ಕೊನೆಯ ಪಂದ್ಯ ನಡೆಯಲಿದೆ.

ಟಿ20 ಸರಣಿಯನ್ನು2–1ರಿಂದ ಗೆದ್ದ ರೋಹಿತ್ ಶರ್ಮಾ ಬಳಗದ ಬಹುತೇಕ ಆಟಗಾರರು ಚುಟುಕು ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ. ಇದರಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾರತ ತಂಡವನ್ನು ಎಡಗೈ ಬ್ಯಾಟರ್ ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಟಿ20 ಸರಣಿಯಲ್ಲಿ ಆಡಿದ್ದ ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್ ಹಾಗೂ ಶ್ರೇಯಸ್ ಅಯ್ಯರ್ ಅವರು ಈ ತಂಡದಲ್ಲಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.