ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs AFG: ಭಾರತಕ್ಕೆ ಸರಣಿ ಗೆಲುವಿನ ಗುರಿ; ಕೊಹ್ಲಿ ಆಡುವ ನಿರೀಕ್ಷೆ

Published 13 ಜನವರಿ 2024, 10:49 IST
Last Updated 13 ಜನವರಿ 2024, 10:49 IST
ಅಕ್ಷರ ಗಾತ್ರ

ಇಂದೋರ್: ಅಫ್ಗಾನಿಸ್ತಾನ ವಿರುದ್ಧ ನಡೆಯಲಿರುವ ಎರಡನೇ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯ ನಾಳೆ (ಭಾನುವಾರ) ಇಂದೋರ್‌ನಲ್ಲಿ ನಡೆಯಲಿದೆ.

ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆರು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

ಈಗ ಇಂದೋರ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯವನ್ನು ಗೆದ್ದು ಸರಣಿ ಗೆಲ್ಲುವ ಗುರಿ ಇರಿಸಿಕೊಂಡಿದೆ. ಸರಣಿಯ ಅಂತಿಮ ಪಂದ್ಯ ಜನವರಿ 17ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಕೊಹ್ಲಿ ಆಡುವ ನಿರೀಕ್ಷೆ...

ವೈಯಕ್ತಿಕ ಕಾರಣದಿಂದಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಎರಡು ಹಾಗೂ ಮೂರನೇ ಪಂದ್ಯದಲ್ಲಿ ಆಡುವ ನಿರೀಕ್ಷೆಯಿದೆ.

2022ರ ಟ್ವೆಂಟಿ-20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಕೊಹ್ಲಿ ಕೊನೆಯದಾಗಿ ಅಂತರರಾಷ್ಟ್ರೀಯ ಟ್ವೆಂಟಿ-20 ಪಂದ್ಯವನ್ನು ಆಡಿದ್ದರು. ಸುಮಾರು 14 ತಿಂಗಳ ನಂತರ ಈಗ ಮತ್ತೆ ಚುಟುಕು ಕ್ರಿಕೆಟ್‌ನಲ್ಲಿ ಪ್ಯಾಡ್ ಕಟ್ಟಲು ಸಜ್ಜಾಗಿದ್ದಾರೆ.

ಆ ಮೂಲಕ ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆಡುವ ಇರಾದೆಯನ್ನು ಕೊಹ್ಲಿ ಹೊಂದಿದ್ದಾರೆ. ಆದರೆ ಈ ಟೂರ್ನಿಯ ಬಳಿಕ ವಿಶ್ವಕಪ್‌ಗೂ ಮುನ್ನ ಭಾರತ ಯಾವುದೇ ಅಂತರರಾಷ್ಟ್ರೀಯ ಟ್ವೆಂಟಿ-20 ಟೂರ್ನಿಯಲ್ಲಿ ಆಡುತ್ತಿಲ್ಲ. ಹಾಗಾಗಿ ಈ ಟೂರ್ನಿಯು ಕೊಹ್ಲಿ ಸೇರಿದಂತೆ ಟೀಮ್ ಇಂಡಿಯಾದ ಆಟಗಾರರಿಗೆ ಮಹತ್ವದೆನಿಸಿದೆ.

ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಅದಕ್ಕೂ ಮುನ್ನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆಯೋಜನೆಯಾಗಲಿದೆ.

ನಾಯಕ ರೋಹಿತ್ ಶರ್ಮಾ ಈಗಾಗಲೇ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪುನರಾಗಮನ ಮಾಡಿದ್ದಾರೆ. ಆದರೆ ಅಫ್ಗಾನಿಸ್ತಾನ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ರನೌಟ್ ಆಗುವ ಮೂಲಕ ನಿರಾಸೆ ಅನುಭವಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT