ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

IND vs AUS: ಏಕದಿನದಲ್ಲೂ ನಾಯಕತ್ವ ವಹಿಸಿದ ಹಾರ್ದಿಕ್; ಭಾರತ ಫೀಲ್ಡಿಂಗ್

Last Updated 17 ಮಾರ್ಚ್ 2023, 9:14 IST
ಅಕ್ಷರ ಗಾತ್ರ

ಮುಂಬೈ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಈ ಮೂಲಕ ಇದೇ ಮೊದಲ ಬಾರಿಗೆ ಹಾರ್ದಿಕ್ ಪಾಂಡ್ಯ ಏಕದಿನದಲ್ಲೂ ಟೀಮ್ ಇಂಡಿಯಾದ ನಾಯಕತ್ವ ವಹಿಸಿದ್ದಾರೆ.

ತಾಜಾ ವರದಿಯ ವೇಳೆಗೆ ಆಸ್ಟ್ರೇಲಿಯಾ 12.3 ಓವರ್‌ಗಳಲ್ಲಿ 77 ರನ್ನಿಗೆ ಎರಡು ವಿಕೆಟ್ ಕಳೆದುಕೊಂಡಿದೆ. 5 ರನ್ ಗಳಿಸಿದ ಟ್ರಾವಿಸ್ ಹೆಡ್ ಅವರನ್ನು ಮೊಹಮ್ಮದ್ ಸಿರಾಜ್ ಕ್ಲೀನ್ ಬೌಲ್ಡ್ ಮಾಡಿದರು.

ಎರಡನೇ ವಿಕೆಟ್‌ಗೆ ಮಿಚೆಲ್ ಮಾರ್ಷ್ ಹಾಗೂ ನಾಯಕ ಸ್ಟೀವ್ ಸ್ಮಿತ್ 72 ರನ್‌ಗಳ ಜೊತೆಯಾಟ ಕಟ್ಟಿದರು.

ಈ ವೇಳೆ ದಾಳಿಗಿಳಿದ ನಾಯಕ ಪಾಂಡ್ಯ, 22 ರನ್ ಗಳಿಸಿದ ಸ್ಮಿತ್ ಅವರನ್ನು ಹೊರದಬ್ಬಿದರು.

ಇತ್ತೀಚೆಗಷ್ಟೇ ಅಂತ್ಯಗೊಂಡ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-1ರ ಅಂತರದ ಗೆಲುವು ದಾಖಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT