ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ನಾಟು ನಾಟು' ಮೋಡಿ: ಸಖತ್ ಸ್ಟೆಪ್ಸ್ ಹಾಕಿದ ವಿರಾಟ್ ಕೊಹ್ಲಿ

Last Updated 17 ಮಾರ್ಚ್ 2023, 16:07 IST
ಅಕ್ಷರ ಗಾತ್ರ

ಮುಂಬೈ: ಆಸ್ಕರ್ ಪ್ರಶಸ್ತಿ ಗೆಲ್ಲುವ ಮೂಲಕ ಭಾರತೀಯರ ಹೆಮ್ಮೆಗೆ ಪಾತ್ರವಾಗಿರುವ 'ನಾಟು ನಾಟು' ಹಾಡಿಗೆ ಹೆಜ್ಜೆ ಹಾಕುವ ಮೂಲಕ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಗಮನ ಸೆಳೆದಿದ್ದಾರೆ.

ವಾಂಖೆಡೆ ಮೈದಾನದಲ್ಲಿ ಶುಕ್ರವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾದ ಇನಿಂಗ್ಸ್ ನಡುವೆ ನಾಟು ನಾಟು ಹಾಡಿಗೆ ವಿರಾಟ್ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

ಈ ವಿಡಿಯೊವನ್ನು ಆರ್‌ಆರ್‌ಆರ್ ಚಿತ್ರತಂಡವು ಹಂಚಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

ಎಸ್.ಎಸ್‌.ರಾಜಮೌಳಿ ನಿರ್ದೇಶನದ ತೆಲುಗಿನ ಆರ್‌ಆರ್‌ಆರ್‌ ಚಿತ್ರದ 'ನಾಟು ನಾಟು' ಗೀತೆ ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿ ಜಯಿಸಿದೆ. ಅತ್ಯುತ್ತಮ ಮೂಲಗೀತೆ (ಒರಿಜಿನಲ್‌) ವರ್ಗದಲ್ಲಿ ಆಸ್ಕರ್ ಪ್ರಶಸ್ತಿ ಒಲಿದು ಬಂದಿದೆ.

ಇದಕ್ಕೂ ಮೊದಲು ನಾಟು ನಾಟು ಗೀತೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಬಾಚಿಕೊಂಡಿತ್ತು.

ಜೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಹೆಜ್ಜೆ ಹಾಕಿದ್ದ ಆರ್‌ಆರ್‌ಆರ್‌ ಚಿತ್ರದ 'ನಾಟು ನಾಟು' ಹಾಡು ಈಗಾಗಲೇ ಜನತ್ತಿನಾದ್ಯಂತ ಸಂಚಲನ ಸೃಷ್ಟಿಸಿದೆ.

ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನದ ನಾಟು ನಾಟು ಹಾಡಿಗೆ ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗಂಜ್ ಕಂಠ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT