ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 49 ಓವರ್‌ಗಳಲ್ಲಿ 269 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ.
ಈ ಮೂಲಕ ಸರಣಿ ಗೆಲ್ಲಲು ರೋಹಿತ್ ಶರ್ಮಾ ಬಳಗವು 270 ರನ್ ಗಳಿಸಬೇಕಿದೆ.
ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ 47, ಅಲೆಕ್ಸ್ ಕ್ಯಾರಿ 38, ಟ್ರಾವಿಸ್ ಹೆಡ್ 33, ಮಾರ್ನಸ್ ಲಾಬುಶೇನ್ 28, ಸೀನ್ ಅಬಾಟ್ 26, ಮಾರ್ಕಸ್ ಸ್ಟೋಯಿನಿಸ್ 25, ಆಶ್ಟನ್ ಅಗರ್ 17, ಮಿಚೆಲ್ ಸ್ಟಾರ್ಸ್ 10 ಹಾಗೂ ಆ್ಯಡಂ ಜಾಂಪಾ ಅಜೇಯ 10 ರನ್ ಗಳಿಸಿದರು.
ನಾಯಕ ಸ್ಟೀವ್ ಮಿತ್ ಖಾತೆ ತೆರೆಯುವಲ್ಲಿ ವಿಫಲರಾದರು. ಭಾರತದ ಪರ ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ ಮೂರು ಮತ್ತು ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್‌ಗಳನ್ನು ಗಳಿಸಿದರು.
ಮಾರ್ಷ್ ಹಾಗೂ ಹೆಡ್ ಮೊದಲ ವಿಕೆಟ್‌ಗೆ 68 ರನ್ ಗಳಿಸಿದರು. ಈ ಹಂತದಲ್ಲಿ ಹಾರ್ದಿಕ್ ತಿರುಗೇಟು ನೀಡಿದರು. ಪರಿಣಾಮ ಆಸ್ಟ್ರೇಲಿಯಾ 138 ರನ್ನಿಗೆ ಐದು ವಿಕೆಟ್ ಕಳೆದುಕೊಂಡಿತು. ಆದರೆ ಕೆಳ ಕ್ರಮಾಂಕದಲ್ಲಿ ಆಸೀಸ್ ಆಟಗಾರರ ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ಸ್ಪರ್ಧಾತ್ಮಕ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು.
ಮೊದಲ ಏಕದಿನ ಪಂದ್ಯದಲ್ಲಿ ಭಾರತ ಜಯಿಸಿದ್ದರೆ ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಇತ್ತಂಡಗಳ ಪಾಲಿಗೆ ಈ ಪಂದ್ಯ ನಿರ್ಣಾಯಕವೆನಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.