ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs AUS 4th Test| ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್‌ ಆಯ್ಕೆ

ಪಂದ್ಯ ವೀಕ್ಷಿಸಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅಂತೋನಿ ಅಲ್ಬೇನಿಸ್‌
Last Updated 9 ಮಾರ್ಚ್ 2023, 4:41 IST
ಅಕ್ಷರ ಗಾತ್ರ

ಅಹಮದಾಬಾದ್‌: ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಆರಂಭವಾಗಿರುವ ನಾಲ್ಕನೇ ಮತ್ತು ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಆಸಿಸ್‌ ನಾಯಕ ಸ್ಟೀವ್ ಸ್ಮಿತ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಮೂರನೇ ಟೆಸ್ಟ್‌ ಪಂದ್ಯದಲ್ಲಿ ಆಡಿದ್ದ ಆಟಗಾರರನ್ನೇ ನಾಲ್ಕನೇ ಪಂದ್ಯಕ್ಕೂ ಉಳಿಸಿಕೊಳ್ಳಲಾಗಿದೆ ಎಂದು ಸ್ಮಿತ್‌ ತಿಳಿಸಿದರು. ನಾಲ್ಕು ಪಂದ್ಯಗಳ ಸರಣಿಯಲ್ಲಿ ಭಾರತ 2-1ರ ಮುನ್ನಡೆ ಸಾಧಿಸಿದೆ.

ಟಾಸ್ ಗೆದ್ದಿದ್ದರೆ ನಾವು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದೆವು ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದರು.

ಆತಿಥೇಯ ಭಾರತವು ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಬೌಲರ್ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ನೀಡಿದೆ. ಅವರ ಸ್ಥಾನಕ್ಕೆ ಮೊಹಮ್ಮದ್ ಶಮಿ ಬಂದಿದ್ದಾರೆ.

ಬಾರ್ಡರ್‌–ಗಾವಸ್ಕರ್ ಟ್ರೋಫಿ ವಿಜಯ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪ್ರವೇಶದ ಗುರಿಗಳು ಈಡೇರಬೇಕಾದರೆ ಭಾರತ ತಂಡವು ನಾಲ್ಕನೇ ಟೆಸ್ಟ್‌ ಅನ್ನು ಗೆಲ್ಲಲೇಬೇಕಾಗಿದೆ.

ಮೋದಿ–ಅಲ್ಬೇನಿಸ್ ಆಗಮನ

ಅಹಮದಾಬಾದ್: ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅಂತೋನಿ ಅಲ್ಬೇನಿಸ್‌ ಆಗಮಿಸಿದ್ದಾರೆ.

‘ಇದರಿಂದಾಗಿ ಕ್ರೀಡಾಂಗಣಕ್ಕೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. 1.10 ಲಕ್ಷ ಜನರು ಕುಳಿತು ಕೊಳ್ಳಬಹುದಾದ ಪ್ರೇಕ್ಷಕರ ಗ್ಯಾಲರಿಗಳಿರುವ ಕ್ರೀಡಾಂಗಣ ಇದಾಗಿದೆ. ಪಂದ್ಯದ ಮೊದಲ ದಿನ ಒಂದು ಲಕ್ಷ ಜನರು ಹಾಜರಾಗುವ ನಿರೀಕ್ಷೆ ಇದೆ.

ತಂಡಗಳು
ಭಾರತ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಉಮೇಶ್ ಯಾದವ್, ಮೊಹಮ್ಮದ್ ಶಮಿ

ಆಸ್ಟ್ರೇಲಿಯಾ: ಉಸ್ಮಾನ್ ಖ್ವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್ (ನಾಯಕ), ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಂಬ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಟ್ ಕುನೆಮನ್,

ಅಂಪೈರ್‌ಗಳು: ನಿತಿನ್ ಮೆನನ್, ರಿಚರ್ಡ್ ಕೆಟಲ್‌ಬರೋ

ಟಿವಿ ಅಂಪೈರ್: ಜೋಯಲ್ ವಿಲ್ಸನ್

ಪಂದ್ಯದ ರೆಫರಿ: ಕ್ರಿಸ್ ಬ್ರಾಡ್

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT