ಮೆಲ್ಬರ್ನ್: ಇಲ್ಲಿ ಶನಿವಾರ ಆರಂಭವಾಗಿರುವ ಆಸ್ಟ್ರೇಲಿಯಾ ಎದುರಿನ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಭಾರತದ ಸ್ಪಿನ್ನರ್ ಆರ್. ಅಶ್ವಿನ್ ಮೂರು, ವೇಗಿ ಜಸ್‌ಪ್ರೀತ್ ಬೂಮ್ರಾ ನಾಲ್ಕು ವಿಕೆಟ್ ಪಡೆದು ಮಿಂಚಿದರು.

ಭಾರತದ ಎದುರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 72.3 ಓವರ್‌ಗಳಲ್ಲಿ 195 ರನ್ ಗಳಿಸಿ ಆಲೌಟ್ ಆಗಿದೆ.

ಆಸ್ಟ್ರೇಲಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಜೋ ಬರ್ನ್ಸ್ ಅವರನ್ನು ರನ್ ಖಾತೆ ತೆರೆಯುವ ಮುನ್ನ ಬೂಮ್ರಾ ಪೆವಿಲಿಯನ್ ಹಾದಿ ತೊರಿಸಿದರು. ಬಳಿಕ ಬಂದ ಮ್ಯಾಥ್ಯೂ ವೇಡ್ 30, ಮಾರ್ನಸ್ ಲಾಬು ಷೇನ್ 48, ಟ್ರಾವಿಸ್ ಹೆಡ್ 38 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ವೇಡ್ ಹಾಗೂ ಸ್ಟೀವ್ ಸ್ಮಿತ್ (00) ವಿಕೆಟ್ ಪಡೆಯುವಲ್ಲಿ ಅಶ್ವಿನ್ ಯಶಸ್ವಿಯಾದರು.

ಭಾರತದ ಪರ ಮೊಹಮ್ಮದ್ ಸಿರಾಜ್ 2 ರವೀಂದ್ರ ಜಡೇಜ 1 ವಿಕೆಟ್ ಪಡೆದಿದ್ದಾರೆ.

ನಾಲ್ಕು ಪಂದ್ಯಗಳ ಬಾರ್ಡರ್–ಗಾವಸ್ಕರ್ ಸರಣಿಯಲ್ಲಿ ಆತಿಥೇಯರು 1–0 ಮುನ್ನಡೆ ಸಾಧಿಸಿದ್ದಾರೆ. ಭಾರತವು ಈ ಪಂದ್ಯ ಗೆದ್ದು ಸಮಬಲ ಸಾಧಿಸಿದರೆ, ಸರಣಿ ಜಯದ ಆಸೆ ಜೀವಂತವಾಗುಳಿಯುತ್ತದೆಯಲ್ಲದೇ, ನಡೆಯುವ ಮೂರನೇ ಟೆಸ್ಟ್ ರೋಚಕವಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.