ಅಡಿಲೇಡ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್ ಅಂತರದ ಹೀನಾಯ ಸೋಲಿಗೆ ಗುರಿಯಾಗಿದೆ.

ಇದರೊಂದಿಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ (ಡಬ್ಲ್ಯುಟಿಸಿ) ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ 3ನೇ ಸ್ಥಾನಕ್ಕೆ ಕುಸಿತ ಕಂಡಿದೆ.

ಮತ್ತೊಂದೆಡೆ ಗೆಲುವಿನ ಲಯಕ್ಕೆ ಮರಳಿರುವ ಆಸೀಸ್, ಡಬ್ಲ್ಯುಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಮಗದೊಮ್ಮೆ ಅಗ್ರಸ್ಥಾನಕ್ಕೇರಿದೆ.

ಈ ಸೋಲಿನೊಂದಿಗೆ ಭಾರತದ ಶೇಕಡಾವಾರು ಪಾಯಿಂಟ್ (ಪಿಸಿಟಿ), 61.11ರಿಂದ 57.29ಕ್ಕೆ ಇಳಿಕೆಯಾಗಿದೆ. ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ 60.71 ಮತ್ತು ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ 59.26 ಶೇಕಡಾವಾರು ಪಾಯಿಂಟ್ ಹೊಂದಿದೆ.

ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನ ಪಡೆದ ತಂಡಗಳು ಫೈನಲ್ಗೆ ಅರ್ಹತೆ ಗಿಟ್ಟಿಸಲಿವೆ. ಇದರೊಂದಿಗೆ ಸರಣಿಯ ಉಳಿದ ಮೂರು ಪಂದ್ಯಗಳು ಭಾರತದ ಪಾಲಿಗೆ ನಿರ್ಣಾಯಕವೆನಿಸಿವೆ. ಇನ್ನೊಂದು ಸೋಲು ಕಂಡರೆ ಡಬ್ಲ್ಯುಸಿ ಫೈನಲ್ ಕನಸು ಭಗ್ನಗೊಳ್ಳುವ ಭೀತಿಯಿದೆ.

ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಅಂತರದ ಜಯ ಗಳಿಸಿರುವ ಆಸ್ಟ್ರೇಲಿಯಾ, ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 1-1ರ ಅಂತರದ ಸಮಬಲ ಸಾಧಿಸಿದೆ.

ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 295 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿತ್ತು. ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್ನಲ್ಲಿ ಡಿಸೆಂಬರ್ 14ರಿಂದ 18ರವರೆಗೆ ನಡೆಯಲಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ರ್ಯಾಂಕಿಂಗ್ ಪಟ್ಟಿ:
.Pink Ball Test: ಸ್ಟಾರ್ಕ್ ಬಿರುಗಾಳಿಗೆ ಕುಸಿದ ರೋಹಿತ್ ಬಳಗ.ಮಗನ ಕ್ರಿಕೆಟ್ ಜೀವನ ಹಾಳು ಮಾಡಿದ ಧೋನಿ,ಕೊಹ್ಲಿ, ರೋಹಿತ್, ದ್ರಾವಿಡ್: ಸಂಜು ತಂದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.