ಶನಿವಾರ, ಜನವರಿ 23, 2021
27 °C

IND vs AUS: ಆಸೀಸ್ ಬ್ಯಾಟಿಂಗ್; ವಾರ್ನರ್ ಔಟ್ ಮಾಡಿದ ಸಿರಾಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಡ್ನಿ: ಪ್ರವಾಸಿ ಭಾರತ ವಿರುದ್ಧ ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. 

ಈ ಮಧ್ಯೆ ಮಳೆ ಸುರಿದ ಪರಿಣಾಮ ಪಂದ್ಯಕ್ಕೆ ಅಡಚಣೆಯಾಗಿದೆ. ಈ ವೇಳೆಗೆ ಆಸ್ಟ್ರೇಲಿಯಾ 7.1 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 21  ರನ್ ಗಳಿಸಿತ್ತು. 

ಇದನ್ನೂ ಓದಿ: 

ವಾರ್ನರ್ ಹೊರದಬ್ಬಿದ ಸಿರಾಜ್...
ಗಾಯದಿಂದ ಚೇತರಿಸಿಕೊಂಡಿರುವ ಡೇವಿಡ್ ವಾರ್ನರ್ ಕಮ್‌ಬ್ಯಾಕ್ ಮಾಡಿದ್ದರು. ಅವರನ್ನು ಹೊರದಬ್ಬಿದ ಬಲಗೈ ವೇಗಿ ಮೊಹಮ್ಮದ್ ಸಿರಾಜ್, ಎದುರಾಳಿಗಳಿಗೆ ಆರಂಭಿಕ ಆಘಾತವನ್ನು ನೀಡಿದರು. 

ಈಗ ಕ್ರೀಸಿನಲ್ಲಿರುವ ವಿಲ್ ಪುಕೊವಸ್ಕಿ ಹಾಗೂ ಮಾರ್ನಸ್ ಲಾಬುಷೇನ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. 

ಸೈನಿ ಡೆಬ್ಯು, ರೋಹಿತ್ ಆರಂಭಿಕ...
ಭಾರತ ತಂಡದಲ್ಲಿ ಯುವ ವೇಗದ ಬೌಲರ್ ನವದೀಪ್ ಸೈನಿ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಅತ್ತ ಉಪ ನಾಯಕ ಸ್ಥಾನಕ್ಕೆ ಬಡ್ತಿ ಪಡೆದಿರುವ ರೋಹಿತ್ ಶರ್ಮಾ  ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಇವರಿಗೆ ಕರ್ನಾಟಕದ ಮಯಂಕ್ ಅಗರವಾಲ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ. 

ಅತ್ತ ಆಸ್ಟ್ರೇಲಿಯಾ ಪರ ವಿಲ್ ಪುಕೊವಸ್ಕಿ ಚೊಚ್ಚಲ ಪಂದ್ಯವನ್ನಾಡುತ್ತಿದ್ದಾರೆ. 

ಆಡುವ ಬಳಗ ಇಂತಿದೆ:

ಭಾರತ: ಅಜಿಂಕ್ಯ ರಹಾನೆ (ನಾಯಕ), ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ಹನುಮವಿಹಾರಿ, ರಿಷಭ್ ಪಂತ್ (ವಿಕೆಟ್‌ಕೀಪರ್), ರವೀಂದ್ರ ಜಡೇಜ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್, ಜಸ್‌ಪ್ರೀತ್ ಬೂಮ್ರಾ, ನವದೀಪ್ ಸೈನಿ.

ಆಸ್ಟ್ರೇಲಿಯಾ: ಟೀಮ್ ಪೇನ್ (ನಾಯಕ–ವಿಕೆಟ್‌ಕೀಪರ್), ಡೇವಿಡ್ ವಾರ್ನರ್, ಮ್ಯಾಥ್ಯೂ ವೇಡ್, ವಿಲ್ ಪುಕೊವಸ್ಕಿ, ಮಾರ್ನಸ್ ಲಾಬುಷೇನ್, ಸ್ಟೀವ್ ಸ್ಮಿತ್,  ಕ್ಯಾಮರಾನ್ ಗ್ರೀನ್, ನೇಥನ್ ಲಯನ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್,  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು