ಅಡಿಲೇಡ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಇಲ್ಲಿ ಆರಂಭವಾಗಿರುವ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ ಕೆಟ್ಟ ಆರಂಭವನ್ನು ಪಡೆದಿದೆ.

ಎರಡನೇ ಟೆಸ್ಟ್ ಪಂದ್ಯದ ಮೊದಲ ಎಸೆತದಲ್ಲೇ ಯಶಸ್ವಿ ಜೈಸ್ವಾಲ್ ಶೂನ್ಯಕ್ಕೆ ಔಟ್ ಆದರು.

ಭಾರತದ ಯುವ ಆಟಗಾರನನ್ನು ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಎಲ್ಬಿಡಬ್ಲ್ಯು ಬಲೆಗೆ ಬೀಳಿಸಿದರು.

ಆ ಮೂಲಕ ಇನಿಂಗ್ಸ್ನ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸುವ ಮೂಲಕ ಜೈಸ್ವಾಲ್ 'ಗೋಲ್ಡನ್ ಡಕ್' ಆದರು.

ಪರ್ತ್ನಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲೂ ಸ್ಟಾರ್ಕ್ ದಾಳಿಯಲ್ಲೇ ಜೈಸ್ವಾಲ್ ಶೂನ್ಯಕ್ಕೆ ಔಟ್ ಆಗಿದ್ದರು. ಆದರೆ ದ್ವಿತೀಯ ಇನಿಂಗ್ಸ್ನಲ್ಲಿ ಅಮೋಘ ಶತಕ (161) ಸಿಡಿಸಿದ್ದರು.

ಇದರೊಂದಿಗೆ ಆಸ್ಟ್ರೇಲಿಯಾ ನೆಲದಲ್ಲಿ ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲೇ ಶತಕದ ಸಾಧನೆ ಮಾಡಿದ್ದರು.

ಪರ್ತ್ ಟೆಸ್ಟ್ ಪಂದ್ಯದ ವೇಳೆ ಸ್ಟಾರ್ಕ್ ಹಾಗೂ ಜೈಸ್ವಾಲ್ ನಡುವೆ ಕಾವೇರಿದ ವಾತಾವರಣ ಸೃಷ್ಟಿಯಾಗಿತ್ತು. ಈಗ ದ್ವಿತೀಯ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ಜೈಸ್ವಾಲ್ ಅವರ ವಿಕೆಟ್ ಪಡೆಯುವಲ್ಲಿ ಸ್ಟಾರ್ಕ್ ಯಶಸ್ವಿಯಾಗಿದ್ದಾರೆ.

ರಾಹುಲ್ಗೆ ಜೀವದಾನ...

ಏತನ್ಮಧ್ಯೆ ಕೆ.ಎಲ್.ರಾಹುಲ್ ಎರಡು ಜೀವದಾನಗಳನ್ನು ಪಡೆದಿದ್ದಾರೆ. ಸ್ಕಾಟ್ ಬೋಲ್ಯಾಂಡ್ ದಾಳಿಯಲ್ಲಿ ಔಟ್ ಆಗಿದ್ದರೂ ನೋ ಬಾಲ್ ಆಗಿದ್ದರಿಂದ ಜೀವದಾನ ಪಡೆದರು. ಅದೇ ಓವರ್ನಲ್ಲಿ ರಾಹುಲ್ ಅವರ ಕ್ಯಾಚ್ ಅನ್ನು ಉಸ್ಮಾನ್ ಖ್ವಾಜಾ ಕೈಚೆಲ್ಲಿದ್ದಾರೆ.
.'ಸ್ಲೋ ಬೌಲಿಂಗ್' ಎಂದು ಕೆಣಕಿದ ಜೈಸ್ವಾಲ್ ಕುರಿತು ಮಿಚೆಲ್ ಸ್ಟಾರ್ಕ್ ಹೇಳಿದ್ದೇನು?.Pink Ball Test | ಮೊದಲ ಇನಿಂಗ್ಸ್ನಲ್ಲಿ ಭಾರತ 180 ರನ್ಗಳಿಗೆ ಆಲೌಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.