ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs AUS | ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17 ಸಾವಿರ ರನ್ ಪೂರೈಸಿದ ರೋಹಿತ್

Last Updated 11 ಮಾರ್ಚ್ 2023, 16:21 IST
ಅಕ್ಷರ ಗಾತ್ರ

ಅಹಮದಾಬಾದ್‌: ಭಾರತ ತಂಡದ ನಾಯಕ ರೋಹಿತ್‌ ಶರ್ಮ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17,000 ರನ್‌ ಪೂರೈಸಿದ ಬ್ಯಾಟರ್‌ ಎನಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್‌–ಗಾವಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ ನಾಲ್ಕನೇ ಪಂದ್ಯದಲ್ಲಿ, 21 ರನ್‌ ಗಳಿಸಿದ್ದ ವೇಳೆ ರೋಹಿತ್‌ ಈ ಸಾಧನೆ ಮಾಡಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ವಿಶ್ವದ 28ನೇ ಹಾಗೂ ಭಾರತದ 6ನೇ ಬ್ಯಾಟರ್‌ ಎನಿಸಿಕೊಂಡರು.

ಭಾರತದ ಪರ ಸಚಿನ್‌ ತೆಂಡೂಲ್ಕರ್‌ (34,357 ರನ್‌), ವಿರಾಟ್‌ ಕೊಹ್ಲಿ (25,106 ರನ್‌), ರಾಹುಲ್‌ ದ್ರಾವಿಡ್‌ (24,208 ರನ್‌), ಸೌರವ್‌ ಗಂಗೂಲಿ (18,575 ರನ್‌) ಹಾಗೂ ಮಹೇಂದ್ರ ಸಿಂಗ್‌ ಧೋನಿ (17,266 ರನ್‌) ಮಾತ್ರವೇ 17 ಸಾವಿರಕ್ಕಿಂತ ಹೆಚ್ಚು ರನ್‌ ಗಳಿಸಿದ್ದಾರೆ. ಈ ಪೈಕಿ ಕೊಹ್ಲಿ ಹೊರತುಪಡಿಸಿ ಉಳಿದವರು ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

35 ವರ್ಷದ ರೋಹಿತ್‌ ಶರ್ಮ, ಇದುವರೆಗೆ 438 ಪಂದ್ಯಗಳ 457 ಇನಿಂಗ್ಸ್‌ಗಳಲ್ಲಿ ಬ್ಯಾಟ್‌ ಬೀಸಿದ್ದು, 17,014 ರನ್‌ ಕಲೆಹಾಕಿದ್ದಾರೆ. ಏಕದಿನ ಮಾದರಿಯಲ್ಲಿ 9,782, ಟೆಸ್ಟ್‌ನಲ್ಲಿ 3,379 ಹಾಗೂ ಟಿ20ಯಲ್ಲಿ 3,853 ರನ್‌ ಗಳಿಸಿಕೊಂಡಿದ್ದಾರೆ.

ಭಾರತ ತಿರುಗೇಟು
ಟೆಸ್ಟ್‌ ಸರಣಿಯ ನಾಲ್ಕನೇ ಟೆಸ್ಟ್‌ ಪಂದ್ಯವು ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾಗಿದೆ.

ಉಸ್ಮಾನ್‌ ಖ್ವಾಜಾ (180 ರನ್‌) ಹಾಗೂ ಕ್ಯಾಮರಾನ್ ಗ್ರೀನ್(114 ರನ್‌) ಸಿಡಿಸಿದ ಶತಕಗಳ ಬಲದಿಂದ ಪ್ರವಾಸಿ ಪಡೆ ಮೊದಲ ಇನಿಂಗ್ಸ್‌ನಲ್ಲಿ 480 ರನ್‌ ಕಲೆಹಾಕಿದೆ. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ, ಮೂರನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್‌ ಕಳೆದುಕೊಂಡು 289 ರನ್‌ ಗಳಿಸಿದೆ.

ಭಾರತ ಪರ ಯುವ ಬ್ಯಾಟರ್‌ ಶುಭಮನ್‌ ಗಿಲ್‌ (128 ರನ್‌) ಶತಕ ಸಿಡಿಸಿದರೆ, ರೋಹಿತ್‌ 35 ರನ್‌ ಗಳಿಸಿದ್ದಾಗ ಔಟಾದರು. ಅಜೇಯ ಅರ್ಧಶತಕ (59 ರನ್‌) ಬಾರಿಸಿರುವ ಮಾಜಿ ನಾಯಕ ಕೊಹ್ಲಿ ಹಾಗೂ ಆಲ್‌ರೌಂಡರ್‌ ರವೀಂದ್ರ ಜಡೇಜ (16 ರನ್‌) ನಾಲ್ಕನೇ ದಿನಕ್ಕೆ ಕ್ರೀಸ್‌ ಕಾಯ್ದುಕೊಂಡಿದ್ದಾರೆ.

ಆಸ್ಟ್ರೇಲಿಯಾದ ಬಾಕಿ ಚುಕ್ತಾ ಮಾಡಲು ಇನ್ನು 191 ರನ್‌ ಗಳಿಸಬೇಕಿದೆ.

ಟೂರ್ನಿಯ ಮೊದಲೆರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಭಾರತಕ್ಕೆ, ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಿರುಗೇಟು ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT