ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಲಭ ಕ್ಯಾಚ್ ಕೈಚೆಲ್ಲಿದ ಕ್ಯಾಪ್ಟನ್ ಕೊಹ್ಲಿ; ಆದರೂ ಕೈಬಿಡದ ಲಕ್!

Last Updated 6 ಡಿಸೆಂಬರ್ 2020, 10:39 IST
ಅಕ್ಷರ ಗಾತ್ರ

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ದ್ವಿತೀಯ ಟ್ವೆಂಟಿ-20 ಪಂದ್ಯವು ಟೀಮ್ ಇಂಡಿಯಾ ಕ್ಷೇತ್ರರಕ್ಷಣೆಯ ದೃಷ್ಟಿಕೋನದಿಂದ ಉತ್ತಮವಾಗಿರಲಿಲ್ಲ. ಸುಲಭ ಕ್ಯಾಚ್ ಕೈಚೆಲ್ಲುವ ಮೂಲಕ ನಾಯಕ ವಿರಾಟ್ ಕೊಹ್ಲಿ ನಿರಾಸೆ ಮೂಡಿಸಿದರು.

ಆದರೂ ಅದೃಷ್ಟವಶಾತ್ ಆಸ್ಟ್ರೇಲಿಯಾ ನಾಯಕ ಮ್ಯಾಥ್ಯೂ ವೇಡ್ ರನೌಟ್ ಮಾಡುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾದರು.

ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಇನ್ನೊಂದೆಡೆ ನಾಯಕತ್ವದ ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಬಾರಿಸಿದ ವೇಡ್ ಭಾರತವನ್ನು ಕಾಡಿದರು.

ಈ ನಡುವೆ ಇನ್ನಿಂಗ್ಸ್‌ನ ಎಂಟನೇ ಓವರ್‌ನಲ್ಲಿ ವಿರಾಟ್ ಕೊಹ್ಲಿ ಸುಲಭ ಕ್ಯಾಚ್ ಕೈಚೆಲ್ಲಿದರು. ಆಫ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ದಾಳಿಯಲ್ಲಿ ವೇಡ್ ಹೊಡೆದ ಚೆಂಡನ್ನು ಕೊಹ್ಲಿ ಕೈಚೆಲ್ಲುವ ಮೂಲಕ ಟೀಕೆಗೆ ಗುರಿಯಾದರು.

ಆದರೂ ತಮ್ಮ ತಪ್ಪನ್ನು ತಿದ್ದಿಕೊಂಡ ವಿರಾಟ್, ತಕ್ಷಣವೇ ಚೆಂಡವನ್ನು ವಿಕೆಟ್ ಕೀಪರ್ ಕೆಎಲ್ ರಾಹುಲ್ ಕೈಗಳಿಗೆ ಥ್ರೋ ಮಾಡುವ ಮೂಲಕ ರನೌಟ್ ಮಾಡುವಲ್ಲಿ ಯಶಸ್ವಿಯಾದರು. ತಕ್ಷಣವೇ ರಾಹುಲ್ ಬೇಲ್ಸ್ ಹಾರಿಸಿದರು. ಇನ್ನೊಂದೆಡೆ ನಾನ್ ಸ್ಟ್ರೈಕರ್ ಸ್ಟೀವನ್ ಸ್ಮಿತ್ ಜೊತೆಗಿನ ಹೊಂದಾಣಿಕೆ ಕೊರತೆಯಿಂದಾಗಿ ವೇಡ್ ವಿಕೆಟ್ ಒಪ್ಪಿಸಬೇಕಾಯಿತು.

ಕ್ಯಾನ್‌ಬೆರಾದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲೂ ವಿರಾಟ್ ಕೊಹ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ್ದರು. ವಿಶ್ವದ ಅತ್ಯುತ್ತಮ ಫೀಲ್ಡರ್‌ಗಳಲ್ಲಿ ಓರ್ವರೆನಿಸಿರುವ ವಿರಾಟ್ ಕೊಹ್ಲಿ ಕಳಪೆ ಕ್ಷೇತ್ರರಕ್ಷಣೆ ತೋರಿರುವುದು ಆತಂಕಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT