ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs AUS: ಪೂಜಾರ ಆಸರೆ; ಭೋಜನ ವಿರಾಮಕ್ಕೆ ಭಾರತ 180/4

Last Updated 9 ಜನವರಿ 2021, 1:49 IST
ಅಕ್ಷರ ಗಾತ್ರ

ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (ಎಸ್‌ಸಿಜಿ) ಸಾಗುತ್ತಿರುವ ಮೂರನೇ ಟೆಸ್ಟ್ ಪಂದ್ಯದ ತೃತೀಯ ದಿನದಾಟದ ಭೋಜನ ವಿರಾಮದ ಹೊತ್ತಿಗೆ ಭಾರತ ತಂಡವು 79 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿದೆ.

ಇದರೊಂದಿಗೆ ಆರು ವಿಕೆಟ್ ಬಾಕಿ ಉಳಿದಿರುವಂತೆಯೇ ಇನ್ನಿಂಗ್ಸ್ ಮುನ್ನಡೆಗಾಗಿ ಇನ್ನು 158 ರನ್ ಗಳಿಸಬೇಕಿದೆ.

96ಕ್ಕೆ 2 ಎಂಬ ಮೊತ್ತದಿಂದ ದಿನದಾಟ ಮುಂದುವರಿಸಿದ ಭಾರತಕ್ಕೆ ಕಲಾತ್ಮಕ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಆಸರೆಯಾದರು. ಅತ್ತ ನಾಯಕ ಅಜಿಂಕ್ಯ ರಹಾನೆ (22) ಹೆಚ್ಚು ಹೊತ್ತು ನಿಲ್ಲನಿಲ್ಲ.

ಪ್ಯಾಟ್ ಕಮಿನ್ಸ್ ದಾಳಿಯಲ್ಲಿ ಕ್ಲೀನ್ ಬೌಲ್ಡ್ ಆದರು. ಹನುಮ ವಿಹಾರಿ (4) ರನೌಟ್ ಆಗುವುದರೊಂದಿಗೆ ಭಾರತಕ್ಕೆ ಮಗದೊಂದು ಆಘಾತ ಎದುರಾಗಿತ್ತು.

ಈ ಹಂತದಲ್ಲಿ ಜೊತೆಗೂಡಿದ ಪೂಜಾರ ಹಾಗೂ ರಿಷಭ್ ಪಂತ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಪಂತ್ ಆಕ್ರಮಣಕಾರಿಯಾಗಿ ಆಡುವ ಮೂಲಕ ರನ್ ಗತಿಗೆ ಆವೇಗ ತುಂಬಿದರು.

144 ಎಸೆತಗಳನ್ನು ಎದುರಿಸಿರುವ ಪೂಜಾರ ನಾಲ್ಕು ಬೌಂಡರಿಗಳ ನೆರವಿನಿಂದ 42 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇವರಿಗೆ ಸಾಥ್ ನೀಡುತ್ತಿರುವ ರಿಷಭ್ ಪಂತ್ 29 ರನ್ ಗಳಿಸಿ ಕ್ರೀಸಿನಲ್ಲಿದ್ದಾರೆ. ಆಸೀಸ್ ಪರ ಪ್ಯಾಟ್ ಕಮಿನ್ಸ್ ಎರಡು ಮತ್ತು ಜೋಶ್ ಹ್ಯಾಜಲ್‌ವುಡ್ ಒಂದು ವಿಕೆಟ್ ಪಡೆದಿದ್ದಾರೆ.

ಈ ಮೊದಲು ಎರಡನೇ ದಿನದಾಟದಲ್ಲಿ ಸ್ಟೀವನ್ ಸ್ಮಿತ್ ಅವರ ಅಮೋಘ ಶತಕದ ಹೊರತಾಗಿಯೂ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ಮೊತ್ತವನ್ನು 338 ರನ್‌ಗಳಿಗೆ ಸೀಮಿತಗೊಳಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು.

ಸ್ಟೀವನ್ ಸ್ಮಿತ್ 27ನೇ ಟೆಸ್ಟ್ ಶತಕ ಬಾರಿಸಿದ್ದರೆ ಮಾರ್ನಸ್ ಲಾಬುಷೇನ್ 91 ರನ್ ಗಳಿಸಿ ಭಾರತವನ್ನು ಕಾಡಿದರು. ಭಾರತದ ಪರ ರವೀಂದ್ರ ಜಡೇಜ ನಾಲ್ಕು ವಿಕೆಟ್ ಕಬಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT