Ind Vs Aus: ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಡೇವಿಡ್ ವಾರ್ನರ್ ಆಡೋದು ಅನುಮಾನ

ಸಿಡ್ನಿ: ಆಸ್ಟ್ರೆಲಿಯಾ ತಂಡದ ಅನುಭವಿ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಭಾರತದ ವಿರುದ್ಧ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಆಡುವುದು ಅನುಮಾನವೆನಿಸಿದೆ.
ಗಾಯದ ಸಮಸ್ಯೆಯಿಂದಾಗಿ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ಅವರು ಮೂರನೇ ಪಂದ್ಯಕ್ಕೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
‘ನಮಗೆ ಇಂದು ಮತ್ತು ನಾಳೆ ತರಬೇತಿ ಇದೆ. ಹೀಗಾಗಿ ಸದ್ಯ ಯಾವ ಸ್ಥಿತಿಯಲ್ಲಿದ್ದೇನೆ ಎಂಬುದನ್ನು ಹೇಳಲಾಗದು. ನಾನು ಪ್ರತಿಶತ ನೂರರಷ್ಟು ಆಡಲಿದ್ದೇನೆಯೇ? ಅನುಮಾನವಿದೆ’ ಎಂದು ವಾರ್ನರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಆಸ್ಟ್ರೇಲಿಯಾ ತಂಡಕ್ಕೆ ವಾರ್ನರ್, ಪುಕೊವಸ್ಕಿ
ತಂಡದ ತರಬೇತಿಗೆ ಮರುಸೇರ್ಪಡೆಯಾದ ಬಳಿಕ ಬ್ಯಾಟಿಂಗ್ ಬಗ್ಗೆ ಆತ್ಮವಿಶ್ವಾಸ ಹೊಂದಿರುವ ಅವರು ಸದ್ಯದ ಸ್ಥಿತಿಯಲ್ಲಿ ಆಡಲು ಸಾಧ್ಯವೇ ಎಂಬ ಬಗ್ಗೆ ಅನುಮಾನದಿಂದ ಇದ್ದಾರೆ.
ಆದಾಗ್ಯೂ, ಮುಂದಿನ ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಆಡುವ ತಂಡದ ಭಾಗವಾಗಿರಲು ಸಿದ್ಧತೆ ನಡೆಸುತ್ತಿದ್ದೇನೆ ಎಂದೂ ಅವರು ಹೇಳಿದ್ದಾರೆ.
ಒಂದು ವೇಳೆ ವಾರ್ನರ್ ಆಡುವುದು ಸಾಧ್ಯವಾಗದಿದ್ದರೆ, ಜೋ ಬರ್ನ್ಸ್ ತಂಡಕ್ಕೆ ಮರಳುವ ಸಾಧ್ಯತೆ ಇದೆ. ಕಳೆದ ಎರಡು ಟೆಸ್ಟ್ ಪಂದ್ಯಗಳಲ್ಲಿ ವಿಫಲರಾದ ಕಾರಣ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಇದನ್ನೂ ಓದಿ: ’ಎಲ್ಬಿಡಬ್ಲ್ಯು ಆಗಿರಲಿಲ್ಲ; ಹೊರ ನಡಿಯೆಂದಿದ್ದ ಆಸ್ಟ್ರೇಲಿಯನ್ನರು‘
ಜನವರಿ 7ರಿಂದ ಸಿಡ್ನಿಯಲ್ಲಿ ನಡೆಯಲಿರುವ ಭಾರತ ಎದುರಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುವ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಬುಧವಾರ ಪ್ರಕಟಿಸಿತ್ತು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.