ಢಾಕಾ: ಪ್ರವಾಸಿ ಭಾರತ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ನಾಯಕ ಲಿಟನ್ ದಾಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ಎರಡನೇ ಎಕದಿನ ಪಂದ್ಯ ನಡೆಯುತ್ತಿದೆ.

ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಒಂದು ವಿಕೆಟ್ ಅಂತರದ ಸೋಲಿನ ಮುಖಭಂಗಕ್ಕೊಳಗಾಗಿತ್ತು.

ಸರಣಿ ಗೆಲ್ಲಲು ಅಂತಿಮ ಎರಡು ಪಂದ್ಯಗಳಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಎರಡು ಬದಲಾವಣೆ...
ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಅಕ್ಷರ್ ಪಟೇಲ್ ಹಾಗೂ ಉಮ್ರಾನ್ ಮಲಿಕ್ ತಂಡವನ್ನು ಸೇರಿಕೊಂಡಿದ್ದಾರೆ.

ಇವರಿಗಾಗಿ ಶಹಬಾಜ್ ಅಹ್ಮದ್ ಮತ್ತು ಕುಲ್ದೀಪ್ ಸೆನ್ ತಮ್ಮ ತಮ್ಮ ಸ್ಥಾನಗಳನ್ನು ಬಿಟ್ಟುಕೊಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.