ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG 1st Test: ಮೊದಲ ಇನಿಂಗ್ಸ್‌ನಲ್ಲಿ ಭಾರತಕ್ಕೆ 190ರನ್‌ಗಳ ಮುನ್ನಡೆ

Published 27 ಜನವರಿ 2024, 5:31 IST
Last Updated 27 ಜನವರಿ 2024, 5:31 IST
ಅಕ್ಷರ ಗಾತ್ರ

ಹೈದರಾಬಾದ್: ಕನ್ನಡಿಗ ಕೆ.ಎಲ್. ರಾಹುಲ್ ಮತ್ತು ರವೀಂದ್ರ ಜಡೇಜ ಅವರ ಅರ್ಧಶತಕಗಳ ಬಲದಿಂದ ಭಾರತ ತಂಡವು ಇಂಗ್ಲೆಂಡ್ ಎದುರಿನ ಪ್ರಥಮ ಟೆಸ್ಟ್ ಪಂದ್ಯದ ಮೊದಲ ಮೊದಲ ಇನಿಂಗ್ಸ್‌ನಲ್ಲಿ 190ರನ್‌ಗಳ ಮುನ್ನಡೆ ಸಾಧಿಸಿದೆ.

ಉಪ್ಪಳದ ರಾಜೀವಗಾಂಧಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಶನಿವಾರ ಭಾರತ ತಂಡವು 190 ರನ್‌ಗಳ ಮುನ್ನಡೆ ಸಾಧಿಸಿದೆ.

ಇಂಗ್ಲೆಂಡ್‌ ತಂಡವು ಗಳಿಸಿದ್ದ 246 ರನ್‌ಗಳಿಗೆ ಉತ್ತರವಾಗಿ ಆತಿಥೇಯ ತಂಡವು 121 ಓವರ್‌ಗಳಲ್ಲಿ 10 ವಿಕೆಟ್‌ಗಳಿಗೆ 436 ರನ್ ಗಳಿಸಿದೆ. ಜಡೇಜ 87 ಮತ್ತು ಅಕ್ಷರ್ ಪಟೇಲ್ 44 ರನ್‌ಗಳಿಸಿ ಮಿಂಚಿದರು. ಜೋ ರೂಟ್ ಅವರು 4 ವಿಕೆಟ್‌ ಪಡೆದು ಗಮನ ಸೆಳೆದರು. 

ಇದೀಗ ಇಂಗ್ಲೆಂಡ್ ತಂಡ ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ.

ಸಂಕ್ಷಿಪ್ತ ಸ್ಕೋರು:

 ಇಂಗ್ಲೆಂಡ್ ಮೊದಲ ಇನಿಂಗ್ಸ್: 64.3 ಓವರ್‌ಗಳಲ್ಲಿ 246.

 ಭಾರತ ಮೊದಲ ಇನಿಂಗ್ಸ್: 121 ಓವರ್‌ಗಳಲ್ಲಿ 10 ವಿಕೆಟ್‌ಗೆ 436 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT