ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG: ಲಾರ್ಡ್ಸ್‌ನಲ್ಲಿ ಸ್ಮರಣೀಯ ಶತಕ, ವೀರು ದಾಖಲೆ ಸರಿಗಟ್ಟಿದ ರಾಹುಲ್

Last Updated 13 ಆಗಸ್ಟ್ 2021, 2:57 IST
ಅಕ್ಷರ ಗಾತ್ರ

ಲಾರ್ಡ್ಸ್: ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಶತಕ ಗಳಿಸಿರುವ ಕನ್ನಡಿಗ ಕೆ.ಎಲ್. ರಾಹುಲ್, ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ಏಷ್ಯಾದ ಹೊರಗಡೆ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳ ಪೈಕಿ ವೀರು ದಾಖಲೆಯನ್ನು ರಾಹುಲ್ ಸರಿಗಟ್ಟಿದ್ದಾರೆ.

ರಾಹುಲ್ ಹಾಗೂ ಸೆಹ್ವಾಗ್ ತಲಾ ನಾಲ್ಕು ಶತಕಗಳನ್ನು ಹೊಂದಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಮಾಜಿ ದಿಗ್ಗಜ ಸುನಿಲ್ ಗವಾಸ್ಕರ್ ಒಟ್ಟು 15 ಶತಕಗಳನ್ನು ಗಳಿಸಿದ್ದರು.

ಕಳೆದ ಮೂರು ವರ್ಷಗಳಲ್ಲಿ ವಿದೇಶ ನೆಲದಲ್ಲಿ ಶತಕ ಬಾರಿಸಿದ ಭಾರತದ ಆರಂಭಿಕ ಎಂಬ ಗೌರವಕ್ಕೂ ರಾಹುಲ್ ಭಾಜನರಾಗಿದ್ದಾರೆ. ಇಲ್ಲಿ ಗಮನಾರ್ಹ ಅಂಶವೆಂದರೆ ರಾಹುಲ್ ಅವರಿಂದಲೇ ಕೊನೆಯ ಶತಕ ದಾಖಲಾಗಿತ್ತು. 2018ರ ಓವಲ್ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಸೆಂಚುರಿ ಬಾರಿಸಿದ್ದರು.

ಒಟ್ಟಾರೆಯಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ರಾಹುಲ್ ಬ್ಯಾಟ್‌ನಿಂದ ಸಿಡಿದ ಆರನೇ ಶತಕ ಇದಾಗಿದೆ. ಈ ಪೈಕಿ ಮೂರು ಶತಕಗಳು ಇಂಗ್ಲೆಂಡ್ ವಿರುದ್ಧವೇ ದಾಖಲಾಗಿವೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಮಿಸ್ ಮಾಡಿಕೊಂಡಿದ್ದ ರಾಹುಲ್ ಈ ಬಾರಿ ಮತ್ತಷ್ಟು ಸೊಗಸಾದ ಇನ್ನಿಂಗ್ಸ್ ಕಟ್ಟಿದರು. 248 ಎಸೆತಗಳನ್ನು ಎದುರಿಸಿದ ರಾಹುಲ್ 12 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 127 ರನ್ ಗಳಿಸಿ ಅಜೇಯರಾಗುಳಿದರು.

ಮೊದಲ ವಿಕೆಟ್‌ಗೆ ರೋಹಿತ್ ಶರ್ಮಾ (83) ಜೊತೆಗೆ 126 ರನ್‌ಗಳ ಜೊತೆಯಾಟ ನೀಡಿದರು. 2011ರ ಬಳಿಕ ಏಷ್ಯಾ ಹೊರಗಡೆ ಭಾರತದ ಆರಂಭಿಕ ಜೋಡಿಯಿಂದ ದಾಖಲಾದ ಮೊದಲ ಶತಕದ ಜೊತೆಯಾಟವು ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT