ಮ್ಯಾಂಚೆಸ್ಟರ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಗಾಯದ ಸಮಸ್ಯೆ ಎದುರಿಸುತ್ತಿರುವ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ. ಇದರಿಂದ ಭಾರತ ತಂಡಕ್ಕೆ ಹಿನ್ನಡೆ ಎದುರಾಗಿದೆ.

ಬೂಮ್ರಾ ಸ್ಥಾನವನ್ನು ಮೊಹಮ್ಮದ್ ಸಿರಾಜ್ ತುಂಬಲಿದ್ದಾರೆ. ಮೊದಲ ಪಂದ್ಯದಲ್ಲಿ ಜೀವನಶ್ರೇಷ್ಠ ಬೌಲಿಂಗ್ ಪ್ರದರ್ಶನ ಮಾಡಿದ್ದ ಬೂಮ್ರಾ, ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಅತ್ತ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.

ಈ ಪಂದ್ಯ ಗೆದ್ದ ತಂಡವು ಮೂರು ಪಂದ್ಯಗಳ ಏಕದಿನ ಸರಣಿ ವಶಪಡಿಸಿಕೊಳ್ಳಲಿದೆ. ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ದಾಖಲಿಸಿದರೆ ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತ್ತು.

ಮಾಜಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಲಯದ ಮೇಲೂ ಎಲ್ಲರ ಗಮನ ಹರಿದಿದೆ.

ಭಾರತ ತಂಡ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್ ಮತ್ತು ಪ್ರಸಿದ್ಧ ಕೃಷ್ಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.