ಮಂಗಳವಾರ, ಸೆಪ್ಟೆಂಬರ್ 28, 2021
24 °C

IND vs ENG: 4ನೇ ದಿನ ಭೋಜನ ವಿರಾಮಕ್ಕೆ ಭಾರತ 329/6

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆನ್ನಿಂಗ್ಟನ್ ಓವಲ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಊಟದ ವಿರಾಮದ ಹೊತ್ತಿಗೆ ಭಾರತ ತಂಡವು ಆರು ವಿಕೆಟ್ ನಷ್ಟಕ್ಕೆ 329 ರನ್ ಗಳಿಸಿದೆ. 

ಇದರೊಂದಿಗೆ 230 ರನ್‌ಗಳ ಮುನ್ನಡೆ ಗಳಿಸಿದೆ. ಈ ಮೂಲಕ ಪಂದ್ಯವು ರೋಚಕ ಹಂತವನ್ನು ತಲುಪಿದೆ. 

ಮೂರು ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿದ್ದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ರವೀಂದ್ರ ಜಡೇಜ (17) ಹಾಗೂ ಅಂಜಿಕ್ಯ ರಹಾನೆ (0) ನಿರಾಸೆ ಮೂಡಿಸಿದರು. 

ನಾಯಕ ವಿರಾಟ್ ಕೊಹ್ಲಿ 44 ರನ್ ಗಳಿಸಿ ಔಟಾದರು. ಈಗ ಕ್ರೀಸಿನಲ್ಲಿರುವ ರಿಷಭ್ ಪಂತ್ (16*) ಹಾಗೂ ಶಾರ್ದೂಲ್ ಠಾಕೂರ್ (11*) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. 

ಭಾರತದ 191 ರನ್‌ಗಳಿಗೆ ಉತ್ತರವಾಗಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 290 ರನ್ ಗಳಿಸಿತ್ತು. ಈ ಮೂಲಕ 99 ರನ್‌ಗಳ ಮುನ್ನಡೆ ಗಳಿಸಿತ್ತು. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು