ಅಹಮದಾಬಾದ್: ಇಂಗ್ಲೆಂಡ್‌ನ 205 ರನ್‌ಗಳಿಗೆ ಉತ್ತರಿಸುತ್ತಿರುವ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದು, ಎರಡನೇ ದಿನದಾಟದ ಟೀ ವಿರಾಮದ ಹೊತ್ತಿಗೆ 62 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿದೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳು ಕಳಪೆ ಪ್ರದರ್ಶನ ನೀಡಿದರು.

ಇನ್ನಿಂಗ್ಸ್ ಮುನ್ನಡೆಗಾಗಿ ಇನ್ನು ನಾಲ್ಕು ವಿಕೆಟ್ ಬಾಕಿ ಉಳಿದಿರುವಂತೆಯೇ 52 ರನ್ ಗಳಿಸಬೇಕಾದ ಅಗತ್ಯವಿದೆ.

ಒಂದು ವಿಕೆಟ್ ನಷ್ಟಕ್ಕೆ 24 ರನ್ ಗಳಿಸಿದ್ದ ಭಾರತ ಎರಡನೇ ದಿನದಾಟದಲ್ಲೂ ಅತಿಯಾದ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿತ್ತು. ಈ ತಂತ್ರವು ಆತಿಥೇಯರಿಗೆ ಮುಳುವಾಗಿ ಪರಿಣಮಿಸಿತ್ತು. 66 ಎಸೆತಗಳಲ್ಲಿ 17 ರನ್ ಗಳಿಸಿದ್ದ (1 ಬೌಂಡರಿ) ಚೇತೇಶ್ವರ್ ಪೂಜಾರ, ಸ್ಪಿನ್ನರ್ ಜ್ಯಾಕ್ ಲೀಚ್ ದಾಳಿಯಲ್ಲಿ ಔಟಾದರು. ಬಳಿಕ ಕ್ರೀಸಿಗಿಳಿದ ನಾಯಕ ವಿರಾಟ್ ಕೊಹ್ಲಿ (0) ಖಾತೆ ತೆರೆಯುವಲ್ಲಿ ವಿಫಲವಾದರು.

ಇದನ್ನೂ ಓದಿ:ವಿರಾಟ್ರನ್ನು ಶೂನ್ಯಕ್ಕೆ ಔಟ್ ಮಾಡಿ ಸೇಡು ತೀರಿಸಿಕೊಂಡ ಬೆನ್ ಸ್ಟೋಕ್ಸ್

ಇದರೊಂದಿಗೆ ಸರಣಿಯಲ್ಲಿ ಎರಡನೇ ಬಾರಿಗೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಕೊಹ್ಲಿ ಹೊರದಬ್ಬಿದ ಬೆನ್ ಸ್ಟೋಕ್ಸ್ ತಿರುಗೇಟು ನೀಡಿದರು. 41 ರನ್ ಗಳಿಸುವಷ್ಟರಲ್ಲಿ ಮೂರು ವಿಕೆಟ್ ಕಳೆದುಕೊಂಡ ಭಾರತ ಸಂಕಷ್ಟಕ್ಕೆ ಸಿಲುಕಿತ್ತು.

ಈ ನಡುವೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ ಶರ್ಮಾ ಆಸರೆಯಾದರು. ಇವರಿಗೆ ಉಪ ನಾಯಕ ಅಜಿಂಕ್ಯ ರಹಾನೆ ಸಾಥ್ ನೀಡಿದರು. ಇವರಿಬ್ಬರು ನಾಲ್ಕನೇ ವಿಕೆಟ್‌ಗೆ 39 ರನ್‌ಗಳ ಜೊತೆಯಾಟ ನೀಡಿದರು.

ಆದರೆ ಭೋಜನ ವಿರಾಮಕ್ಕೆ ಇನ್ನೇನು ಕ್ಷಣಗಳಿರುವಾಗ ರಹಾನೆ ಹೊರದಬ್ಬಿದ ಜೇಮ್ಸ್ ಆ್ಯಂಡರ್ಸನ್ ಮಗದೊಂದು ಆಘಾತ ನೀಡಿದರು. 45 ಎಸೆತಗಳನ್ನು ಎದುರಿಸಿದ ರಹಾನೆ ನಾಲ್ಕು ಬೌಂಡರಿಗಳಿಂದ 27 ರನ್ ಗಳಿಸಿದರು.

ಊಟದ ವಿರಾಮದ ಬಳಿಕವೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ಉತ್ತಮವಾಗಿ ಆಡುತ್ತಿದ್ದ ರೋಹಿತ್ ಶರ್ಮಾ ಅವರನ್ನು ಬೆನ್ ಸ್ಟೋಕ್ಸ್ ಪೆವಿಲಿಯನ್‌ಗೆ ಅಟ್ಟಿದರು. ಅಲ್ಲದೆ ಕೇವಲ ಒಂದು ರನ್ ಅಂತರದಿಂದ ಅರ್ಧಶತಕ ಮಿಸ್ ಮಾಡಿಕೊಂಡರು. 144 ಎಸೆತಗಳನ್ನು ಎದುರಿಸಿದ ರೋಹಿತ್ ಏಳು ಬೌಂಡರಿಗಳಿಂದ 49 ರನ್ ಗಳಿಸಿದರು.

ಇದನ್ನೂ ಓದಿ:ಕೊಹ್ಲಿ-ಸ್ಟೋಕ್ಸ್ ಜಟಾಪಟಿ ಹಿಂದಿನ ಕಾರಣ ಬಹಿರಂಗಪಡಿಸಿದ ಸಿರಾಜ್

ಇನ್ನೊಂದೆಡೆ ರಿಷಭ್ ಪಂತ್ ಹೋರಾಟ ಮುಂದುವರಿಸಿದ್ದಾರೆ. ಆದರೆ ರವಿಚಂದ್ರನ್ ಅಶ್ವಿನ್ (13) ಅವರಿಂದ ಉತ್ತಮ ಬೆಂಬಲ ಸಿಗಲಿಲ್ಲ. 62 ಎಸೆತಗಳನ್ನು ಎದುರಿಸಿರುವ ಪಂತ್ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 36 ರನ್ ಗಳಿಸಿ ಕ್ರೀಸಿನಲ್ಲಿದ್ದಾರೆ. ಇವರಿಗೆ ವಾಷಿಂಗ್ಟನ್ ಸುಂದರ್ (1*) ಸಾಥ್ ನೀಡುತ್ತಿದ್ದಾರೆ.

ಇಂಗ್ಲೆಂಡ್ ತಂಡದ ಪರ ಆ್ಯಂಡರ್ಸನ್, ಸ್ಟೋಕ್ಸ್ ಹಾಗೂ ಜ್ಯಾಕ್ ಲೀಚ್ ತಲಾ ಎರಡು ವಿಕೆಟ್‌ಗಳನ್ನು ಹಂಚಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.