ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG: ಭಾರತ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ

ಅಕ್ಷರ ಗಾತ್ರ

ಎಜ್‌ಬಾಸ್ಟನ್: ಪ್ರವಾಸಿ ಭಾರತ ವಿರುದ್ಧ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಜಸ್‌ಪ್ರೀತ್ ಬೂಮ್ರಾ ಮುನ್ನಡೆಸುತ್ತಿದ್ದಾರೆ. ಈ ಮೂಲಕ ಮಾಜಿ ನಾಯಕ ಕಪಿಲ್ ದೇವ್ ಬಳಿಕ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ನಾಯಕರಾದ ಮೊದಲ ವೇಗದ ಬೌಲರ್ ಎನಿಸಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿರುವ ರೋಹಿತ್ ಶರ್ಮಾ, ಪ್ರತ್ಯೇಕ ವಾಸದಲ್ಲಿದ್ದಾರೆ.

ಗಿಲ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಪೂಜಾರ...
ರೋಹಿತ್ ಅನುಪಸ್ಥಿತಿಯಲ್ಲಿ ಶುಭಮನ್ ಗಿಲ್ ಜೊತೆ ಚೇತೇಶ್ವರ ಪೂಜಾರ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಮಾಜಿ ನಾಯಕ ವಿರಾಟ್ ಕೊಹ್ಲಿ, ಹನುಮ ವಿಹಾರಿ, ಶ್ರೇಯಸ್ ಅಯ್ಯರ್ ಹಾಗೂ ವಿಕೆಟ್ ಕೀಪರ್ ರಿಷಭ್ ಪಂತ್ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಲಿದ್ದಾರೆ.

ರವೀಂದ್ರ ಜಡೇಜ ಹಾಗೂ ಶಾರ್ದೂಲ್ ಠಾಕೂರ್ ಆಲ್‌ರೌಂಡರ್ ಸ್ಥಾನಗಳನ್ನು ನಿಭಾಯಿಸಲಿದ್ದಾರೆ. ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ಹಾಗಾಗಿ ಜಡೇಜ ತಂಡದಲ್ಲಿರುವ ಏಕಮಾತ್ರ ಸ್ಪಿನ್ನರ್ ಎನಿಸಿದ್ದಾರೆ.

ಇನ್ನು ತ್ರಿವಳಿ ವೇಗಿಗಳಾದ ನಾಯಕ ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಜೊತೆಗೆ ಶಾರ್ದೂಲ್ ನಾಲ್ಕನೇ ವೇಗಿಯ ಆಯ್ಕೆಯಾಗಲಿದ್ದಾರೆ.

ಕಳೆದ ವರ್ಷ ಅರ್ಧದಲ್ಲೇ ಮೊಟಕುಗೊಂಡಿರುವ ಸರಣಿಯಲ್ಲಿ ಟೀಮ್ ಇಂಡಿಯಾ 2-1ರ ಅಂತರದ ಮುನ್ನಡೆ ಕಾಯ್ದುಕೊಂಡಿದೆ.

ಅತ್ತ ಇತ್ತೀಚೆಗೆ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ 3-0 ಅಂತರದ ಕ್ಲೀನ್‌ಸ್ವೀಪ್ ಜಯ ಸಾಧಿಸಿರುವ ಇಂಗ್ಲೆಂಡ್, ಸಂಪೂರ್ಣ ಆತ್ಮವಿಶ್ವಾಸದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT