ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG: ಇಂಗ್ಲೆಂಡ್‌ ಆರಂಭಿಕ ವೈಫಲ್ಯ; ಊಟದ ವಿರಾಮಕ್ಕೆ 74/3

Last Updated 4 ಮಾರ್ಚ್ 2021, 6:12 IST
ಅಕ್ಷರ ಗಾತ್ರ

ಅಹಮದಾಬಾದ್: ಭಾರತ ವಿರುದ್ಧ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲೂ ಆರಂಭಿಕ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ಇಂಗ್ಲೆಂಡ್ ತಂಡವು, ಊಟದ ವಿರಾಮದ ಹೊತ್ತಿಗೆ 25 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 74 ರನ್ ಗಳಿಸಿದೆ.

ಭಾರತದ ಪರ ಮಗದೊಮ್ಮೆ ಕೈಚಳಕ ತೋರಿದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಎರಡು ವಿಕೆಟ್ ಕಬಳಿಸಿ ಮಿಂಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಪಡೆದು ಪ್ರಭಾವಿ ದಾಳಿ ಸಂಘಟಿಸಿದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದರೂ ಅದರ ಸಂಪೂರ್ಣ ಪ್ರಯೋಜನ ಪಡೆಯುವಲ್ಲಿ ಇಂಗ್ಲೆಂಡ್ ಯಶಸ್ವಿಯಾಗಲಿಲ್ಲ. ಇನ್ನಿಂಗ್ಸ್‌ನ ಆರನೇ ಓವರ್‌ನಲ್ಲಿ ದಾಳಿಗಿಳಿದ ಅಕ್ಷರ್, ಆರಂಭಿಕ ಡಾಮಿನಿಕ್ ಸಿಬ್ಲಿ (2) ಅವರನ್ನು ಹೊರದಬ್ಬಿದರು.

ಇದಾದ ಬೆನ್ನಲ್ಲೇ ಜ್ಯಾಕ್ ಕ್ರಾಲಿ (2) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ 15 ರನ್ ಗಳಿಸುವಷ್ಟರಲ್ಲಿ ಆರಂಭಿಕರು ಪೆವಿಲಿಯನ್‌ಗೆಮರಳಿದರು.

ಈ ನಡುವೆ ಅಪಾಯಕಾರಿ ಜೋ ರೂಟ್ (5) ಅವರನ್ನು ಎಲ್‌ಬಿಡಬ್ಲ್ಯು ಬಲೆಗೆ ಸಿಲುಕಿಸಿದ ಮೊಹಮ್ಮದ್ ಸಿರಾಜ್ ಭಾರತ ಮೇಲುಗೈ ಸಾಧಿಸಲು ನೆರವಾದರು.

ಏತನ್ಮಧ್ಯೆ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಬೆನ್ ಸ್ಟೋಕ್ಸ್ ಭಾರತಕ್ಕೆ ತಿರುಗೇಟು ನೀಡಿದರು. ಅಲ್ಲದೆ ನಾಲ್ಕನೇ ವಿಕೆಟ್‌ಗೆ ಜಾನಿ ಬೈರ್‌ಸ್ಟೋ ಜೊತೆಗೆ ಉತ್ತಮ ಜೊತೆಯಾಟದಲ್ಲಿ ಭಾಗಿಯಾದರು.

ಇವರಿಬ್ಬರು ಮುರಿಯದ ನಾಲ್ಕನೇ ವಿಕೆಟ್‌ಗೆ 44 ರನ್‌ಗಳ ಜೊತೆಯಾಟ ನೀಡಿದ್ದಾರೆ. ಸ್ಟೋಕ್ಸ್ 24* ಹಾಗೂ ಬೈರ್‌ಸ್ಟೋ 28* ರನ್ ಗಳಿಸಿ ಕ್ರೀಸಿನಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT