ಮಂಗಳವಾರ, ಸೆಪ್ಟೆಂಬರ್ 28, 2021
23 °C

IND vs ENG: ಅಂತಿಮ ಟೆಸ್ಟ್ ಪಂದ್ಯ ಮರುನಿಗದಿಗೊಳಿಸಲು ಬಿಸಿಸಿಐ ಇಂಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ಕೋವಿಡ್ ಭೀತಿಯಿಂದಾಗಿ ರದ್ದುಗೊಂಡಿರುವ ಅಂತಿಮ ಟೆಸ್ಟ್ ಪಂದ್ಯವನ್ನು ಮರುನಿಗದಿಗೊಳಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಉತ್ಸುಕತೆ ತೋರಿದೆ. 

ಈ ಕುರಿತು ಬಿಸಿಸಿಐ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. ಓಲ್ಡ್ ಟ್ರಾಫರ್ಡ್‌ನಲ್ಲಿ ಪಂದ್ಯ ನಿಗದಿತ ವೇಳಾಪಟ್ಟಿಯಂತೆ ಆಯೋಜಿಸಲು ಹಲವು ಸುತ್ತಿನ ಮಾತುಕತೆಗಳನ್ನು ನಡೆಸಲಾಯಿತು. ಆದರೆ ಭಾರತೀಯ ಪಾಳಯದಲ್ಲಿ ಏಕಾಏಕಿ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದರಿಂದ ಮ್ಯಾಂಚೆಸ್ಟರ್ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಯಿತು ಎಂದು ಹೇಳಿದೆ. 

ಇದನ್ನೂ ಓದಿ: 

ಆದ್ಯಾಗೂ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಜೊತೆ ಸದೃಢ ಬಾಂಧವ್ಯ ಕಾಪಾಡಿಕೊಂಡಿರುವ ಬಿಸಿಸಿಐ, ಅಂತಿಮ ಟೆಸ್ಟ್ ಪಂದ್ಯವನ್ನು ಮರುನಿಗದಿಗೊಳಿಸಲು ಇಂಗಿತ ವ್ಯಕ್ತಪಡಿಸಿದೆ. ಇದಕ್ಕಾಗಿ ಎರಡೂ ಮಂಡಳಿಗಳು ಸಮಾಲೋಚನೆ ಮಾಡಿ ಸೂಕ್ತ ವೇಳಾಪಟ್ಟಿಯನ್ನು ರೂಪಿಸುವತ್ತ ಕೆಲಸ ಮಾಡಲಿದೆ.  

ಬಿಸಿಸಿಐ ಯಾವತ್ತೂ ಆಟಗಾರರ ಸುರಕ್ಷತೆ ಹಾಗೂ ಯೋಗಕ್ಷೇಮಕ್ಕಾಗಿ ಹೆಚ್ಚಿನ ಆದ್ಯತೆ ನೀಡಿದ್ದು, ಈ ವಿಚಾರದಲ್ಲಿ ಯಾವುದೇ ರಾಜಿಗೂ ತಯಾರಿಲ್ಲ ಎಂಬುದನ್ನು ತಿಳಿಸಿದೆ. 

ಈ ಕಷ್ಟದ ಸಮಯದಲ್ಲಿ ಸಂಪೂರ್ಣ ಸಹಕಾರ ನೀಡಿರುವ ಇಸಿಬಿಗೆ ಬಿಸಿಸಿಐ ಧ್ಯನವಾದ ಸಲ್ಲಿಸಿದೆ. ಅಲ್ಲದೆ ರೋಚಕ ಸರಣಿಯನ್ನು ಪೂರ್ಣಗೊಳಿಸಲು ಸಾಧ್ಯವಾಗದಿರುವುದಕ್ಕೆ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದೆ. 

ಈ ಮುನ್ನ ಕೋವಿಡ್‌ನಿಂದಾಗಿ ಭಾರತದಿಂದ ತಂಡವನ್ನು ಕಣಕ್ಕಿಳಿಸಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಅಂತಿಮ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ಇಸಿಬಿ ಪ್ರಕಟಣೆಯಲ್ಲಿ ತಿಳಿಸಿತ್ತು. 

ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-1ರ ಅಂತರದ ಮುನ್ನಡೆ ದಾಖಲಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು