ಶುಕ್ರವಾರ, ಏಪ್ರಿಲ್ 23, 2021
21 °C

IND vs ENG: 5ನೇ ಟಿ20: ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಅಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಇಲ್ಲಿ ನಡೆಯುತ್ತಿರುವ 5ನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಮತ್ತೊಮ್ಮೆ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ. ಸತತವಾಗಿ ವಿರಾಟ್ ಕೊಹ್ಲಿ ಟಾಸ್ ಗೆಲ್ಲುವಲ್ಲಿ ವಿಫಲರಾಗಿದ್ದಾರೆ.

5 ಪಂದ್ಯಗಳ ಟಿ20 ಸರಣಿಯಲ್ಲಿ ಎರಡೂ ತಂಡಗಳು ತಲಾ ಎರಡೆರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದು, ಈ ಪಂದ್ಯ ಒಂದು ರೀತಿಯಲ್ಲಿ ಫೈನಲ್ ಎಂಬಂತಾಗಿದೆ.

ಇಂಗ್ಲೆಂಡ್ ಕಳೆದ ಪಂದ್ಯವನ್ನಾಡಿದ ತಂಡವನ್ನೇ ಕಣಕ್ಕಿಳಿಸಿದ್ದು, ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ.

ಫಾರ್ಮ್ ಕಳೆದುಕೊಂಡಿರುವ ಆರಂಭಿಕ ಬ್ಯಾಟ್ಸ್‌ ಮನ್ ಕೆ.ಎಲ್. ರಾಹುಲ್ ಬದಲಿಗೆ ಟಿ. ನಟರಾಜನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ರೋಹಿತ್ ಶರ್ಮಾ ಜೊತೆ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆರಂಭಿಸಿದ್ದಾರೆ.

ಭಾರತ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್, ರಾಹುಲ್ ಚಹಾರ್, ಟಿ ನಟರಾಜನ್.

ಇಂಗ್ಲೆಂಡ್ ತಂಡ: ಜೇಸನ್ ರಾಯ್, ಜೋಸ್ ಬಟ್ಲರ್, ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯೊನ್ ಮೋರ್ಗಾನ್ (ಕ್ಯಾಪ್ಟನ್), ಬೆನ್ ಸ್ಟೋಕ್ಸ್, ಸ್ಯಾಮ್ ಕುರನ್,  ಕ್ರಿಸ್ ಜೋರ್ಡನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು