ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG: ಕೋವಿಡ್‌ ಭೀತಿ, ಅಂತಿಮ ಟೆಸ್ಟ್ ಪಂದ್ಯ ರದ್ದು

Last Updated 10 ಸೆಪ್ಟೆಂಬರ್ 2021, 9:23 IST
ಅಕ್ಷರ ಗಾತ್ರ

ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ಶುಕ್ರವಾರದಿಂದ ಆರಂಭವಾಗಬೇಕಾಗಿದ್ದ ಅಂತಿಮ ಟೆಸ್ಟ್ ಪಂದ್ಯವನ್ನು ಕೋವಿಡ್‌ ಭೀತಿಯಿಂದಾಗಿ ರದ್ದುಗೊಳಿಸಲಾಗಿದೆ.

ಈ ಕುರಿತು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಪ್ರಕಟಣೆಯಲ್ಲಿ ತಿಳಿಸಿದೆ.

ಬಿಸಿಸಿಐ ಜೊತೆಗಿನ ದೀರ್ಘ ಸಮಾಲೋಚನೆಯ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟೆಸ್ಟ್ ಪಂದ್ಯವು ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಶುಕ್ರವಾರದಂದು ಆರಂಭವಾಗಬೇಕಿತ್ತು.

ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಅಂತಿಮ ಟೆಸ್ಟ್ ಪಂದ್ಯಕ್ಕೆ ಭಾರತದಿಂದ ತಂಡವನ್ನು ಕಣಕ್ಕಿಳಿಸಲು ಸಾಧ್ಯವಾಗುತ್ತಿಲ್ಲ ಎಂದು ಇಸಿಬಿ ಹೇಳಿದೆ.

ಗುರುವಾರ ನಡೆಸಿದ ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ಭಾರತ ತಂಡದ ಆಟಗಾರರವರದಿಯು ನೆಗೆಟಿವ್ ಬಂದಿತ್ತು. ಆದರೂ ಭಾರತ ಕ್ಯಾಂಪ್‌ನಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಭೀತಿ ಆವರಿಸಿದೆ. ಈಗಾಗಲೇ ಮುಖ್ಯ ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಹಾಗೂ ಜೂನಿಯರ್ ಫಿಸಿಯೊ ಪ್ರತ್ಯೇಕವಾಸದಲ್ಲಿದ್ದಾರೆ.

ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-1ರ ಅಂತರದ ಮುನ್ನಡೆ ದಾಖಲಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT