ಸೋಮವಾರ, ಸೆಪ್ಟೆಂಬರ್ 20, 2021
30 °C

Ind VS Eng ಮೊದಲ ಟೆಸ್ಟ್: ಭೋಜನ ವಿರಾಮಕ್ಕೆ ಇಂಗ್ಲೆಂಡ್ 61/2

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಟಿಂಗ್‌ಹ್ಯಾಂ: ಇಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದ ಭೋಜನ ವಿರಾಮಕ್ಕೆ ಆತಿಥೇಯ ಇಂಗ್ಲೆಂಡ್ ತಂಡವು 2 ವಿಕೆಟ್ ಕಳೆದುಕೊಂಡು 61 ರನ್ ಗಳಿಸಿತ್ತು.

ವಿರಾಮದ ವೇಳೆಗೆ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ (12) ಮತ್ತು ಡೊಮಿನಿಕ್ ಸಿಬ್ಲಿ (18) ಕ್ರೀಸ್‌ನಲ್ಲಿದ್ದರು.

ಭಾರತದ ಪರ ಜಸ್‌ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಪಡೆದರು.

ರನ್ ಖಾತೆ ತೆರೆಯುವ ಮುನ್ನವೇ ಆರಂಭಿಕ ರೋರಿ ಬರ್ನ್ ಅವರನ್ನು ಬೂಮ್ರಾ ಎಲ್‌ಬಿ ಬಲೆಗೆ ಕೆಡವಿದರೆ, 27 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಜಾಕ್ ಕ್ರಾಲಿಗೆ ಸಿರಾಜ್ ಪೆವಿಲಿಯನ್ ದಾರಿ ತೋರಿಸಿದರು.
ಸಂಕ್ಷಿಪ್ತ ಸ್ಕೋರ್:

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್: 
25 ಓವರ್‌ಗಳಲ್ಲಿ 61/2 ( ಜಾಕ್ ಕ್ರಾಲಿ 27, ಜಸ್‌ಪ್ರೀತ್ ಬೂಮ್ರಾ 1/16)
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು