ಬುಧವಾರ, ಸೆಪ್ಟೆಂಬರ್ 22, 2021
24 °C

Ind VS Eng 4th Test: ಎರಡನೇ ಇನಿಂಗ್ಸ್ ಭೋಜನ ವಿರಾಮಕ್ಕೆ ಭಾರತ 108/1 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಓವಲ್: ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 99 ರನ್‌ಗಳ ಹಿನ್ನಡೆ ಅನುಭವಿಸಿದ್ದ ಭಾರತ ತಂಡ ಎರಡನೇ ಇನಿಂಗ್ಸ್‌ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದೆ.

ಮೂರನೇ ದಿನದಾಟದ ಭೋಜನ ವಿರಾಮಕ್ಕೆ ಭಾರತ 1 ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿದ್ದು, 9 ರನ್ ಮುನ್ನಡೆ ಪಡೆದಿದೆ.

ಮೊದಲ ವಿಕೆಟ್‌ಗೆ 83 ರನ್‌ಗಳ ಜೊತೆಯಾಟ ನೀಡಿದ ರೋಹಿತ್ ಶರ್ಮಾ ಮತ್ತು ಕೆ.ಎಲ್. ರಾಹುಲ್ ಜೋಡಿ ಆಂಗ್ಲರಿಗೆ ತಕ್ಕ ಪ್ರತ್ಯುತ್ತರ ನೀಡಿದರು. 46 ರನ್ ಗಳಿಸಿದ ಆರಂಭಿಕ ಕೆ.ಎಲ್. ರಾಹುಲ್ ಅಂಡರ್ಸನ್‌ಗೆ ವಿಕೆಟ್ ಒಪ್ಪಿಸಿದ್ದಾರೆ.

ಅರ್ಧಶತಕದ ಸನಿಹದಲ್ಲಿರುವ ರೋಹಿತ್ ಶರ್ಮಾ(47) ಮತ್ತು ಚೆತೇಶ್ವರ್ ಪೂಜಾರ(14) ಕ್ರೀಸ್‌ನಲ್ಲಿದ್ದಾರೆ.

ಮೊದಲ ಇನಿಂಗ್ಸ್‌ನಲ್ಲಿ ಭಾರತ 191 ರನ್‌ಗಳಿಗೆ ಆಲೌಟ್ ಆಗಿತ್ತು. 290 ರನ್ ಕಲೆ ಹಾಕಿದ್ದ ಇಂಗ್ಲೆಂಡ್ ತಂಡ 99 ರನ್‌ಗಳ ಮುನ್ನಡೆ ಪಡೆದಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು