ನಾಟಿಂಗ್‌ಹ್ಯಾಂ: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟಕ್ಕೂ ಮಳೆ ಅಡ್ಡಿಯಾಗಿದೆ.
ಭಾರೀ ಮಳೆಯಿಂದಾಗಿ ಮೂರನೇ ದಿನದಾಟ ಸ್ಥಗಿತಗೊಂಡಾಗ ಇಂಗ್ಲೆಂಡ್ ತಂಡ ಎರಡನೇ ಇನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 25 ರನ್ ಗಳಿಸಿ, 70 ರನ್‌ಗಳ ಹಿನ್ನಡೆಯಲ್ಲಿತ್ತು.
ಇದಕ್ಕೂ ಭಾರತ ತಂಡವು 278 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಇನಿಂಗ್ಸ್‌ನಲ್ಲಿ 95 ರನ್‌ಗಳ ಮುನ್ನಡೆ ಪಡೆದಿತ್ತು.
84 ರನ್ ಗಳಿಸಿದ ಕೆ.ಎಲ್. ರಾಹುಲ್ ಮತ್ತು 56 ರನ್ ಕಲೆ ಹಾಕಿದ ರವೀಂದ್ರ ಜಡೇಜಾ ಭಾರತದ ಮುನ್ನಡೆಯಲ್ಲಿ ಪ್ರಮುಖ ಪಾತ್ರ ವಹಿಸಿದರು.
ಮೊದಲ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ 183 ರನ್‌ಗಳಿಗೆ ಆಲೌಟ್ ಆಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.