ಶುಕ್ರವಾರ, ಮೇ 27, 2022
28 °C

IND vs ENG: ಸತತ ಮೂರು ಟೆಸ್ಟ್‌ಗಳಲ್ಲಿ ರೂಟ್ 150 ಪ್ಲಸ್ ರನ್‌ ದಾಖಲೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಚೆನ್ನೈ: ಸತತ ಮೂರು ಟೆಸ್ಟ್ ಪಂದ್ಯಗಳಲ್ಲಿ 150ಕ್ಕೂ ಹೆಚ್ಚು ರನ್‌ಗಳ ಸಾಧನೆ ಮಾಡಿರುವ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ವಿಶಿಷ್ಟ ದಾಖಲೆ ಬರೆದಿದ್ದಾರೆ.

ಭಾರತ ವಿರುದ್ಧ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಜೋ ರೂಟ್ ಈ ಸ್ಮರಣೀಯ ಮೈಲುಗಲ್ಲು ತಲುಪಿದರು.

ಇಲ್ಲಿ ಗಮನಾರ್ಹ ಅಂಶವೆಂದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ಇದುವರೆಗೆ 20 ಶತಕಗಳನ್ನು ಬಾರಿಸಿರುವ ಜೋ ರೂಟ್ ಈ ಪೈಕಿ 10 ಬಾರಿ 150ಕ್ಕೂ ಹೆಚ್ಚು ರನ್‌ಗಳ ಸಾಧನೆ ಮಾಡಿದ್ದಾರೆ.

ಅಷ್ಟೇ ಯಾಕೆ ಜೋ ರೂಟ್ ಅವರು ಕೊನೆಯ ನಾಲ್ಕು ಟೆಸ್ಟ್ ಶತಕಗಳಲ್ಲಿ 150ಕ್ಕೂ ಹೆಚ್ಚು ರನ್‌ಗಳ ಸಾಧನೆ ಬರೆದಿದ್ದಾರೆ.

ಇದನ್ನೂ ಓದಿ: 

ಜೋ ರೂಟ್ ಕೊನೆಯ ನಾಲ್ಕು ಶತಕಗಳು: 226, 228, 186 ಮತ್ತು 150*

ಈ ಹಿಂದೆ 2007ನೇ ಇಸವಿಯಲ್ಲಿ ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕರ ಸತತ ನಾಲ್ಕುಟೆಸ್ಟ್ ಪಂದ್ಯಗಳಲ್ಲಿ 150ಕ್ಕೂ ಹೆಚ್ಚು ರನ್‌ಗಳ ಸಾಧನೆ ಮಾಡಿದ್ದರು. ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಇದು ಶ್ರೇಷ್ಠ ಸಾಧನೆಯಾಗಿದೆ.

ಇನ್ನು ವ್ಯಾಲಿ ಹಮ್ಮಾಂಡ್, ಡಾನ್ ಬ್ರಾಡ್ಮನ್, ಜಹೀರ್ ಅಬ್ಬಾಸ್, ಮುದಾಸ್ಸರ್ ನಜರ್ ಹಾಗೂ ಟಾಮ್ ಲೇಥಮ್ ಟೆಸ್ಟ್ ಕ್ರಿಕೆಟ್‌ನಲ್ಲಿ ಸತತ ಮೂರು ಬಾರಿ 150 ಅಥವಾ ಅದಕ್ಕಿಂತಲೂ ಹೆಚ್ಚು ರನ್‌ಗಳ ಸಾಧನೆ ಮಾಡಿದ್ದಾರೆ. ಈ ಪಟ್ಟಿಗೀಗ ಜೋ ರೂಟ್ ಸೇರ್ಪಡೆಯಾಗಿದ್ದಾರೆ.

ಇತ್ತೀಚೆಗಷ್ಟೇ ಶ್ರೀಲಂಕಾ ವಿರುದ್ಧ ತಮ್ಮ 98 ಹಾಗೂ 99ನೇ ಟೆಸ್ಟ್ ಪಂದ್ಯಗಳಲ್ಲೂ ಜೋ ರೂಟ್ ಶತಕ ಸಾಧನೆ ಮಾಡಿದ್ದರು. ಈ ಮೂಲಕ 98,99 ಹಾಗೂ 100ನೇ ಟೆಸ್ಟ್ ಪಂದ್ಯಗಳಲ್ಲಿ ಹ್ಯಾಟ್ರಿಕ್ ಶತಕ ಸಾಧನೆ ಮಾಡಿದ ವಿಶ್ವದ ಏಕೈಕ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಪಾತ್ರವಾಗಿದ್ದರು. ಈ ಮೂರು ಟೆಸ್ಟ್ ಶತಕಗಳು 2021ನೇ ಸಾಲಿನಲ್ಲಿ ದಾಖಲಾಗಿರುವುದು ವಿಶೇಷ.

ಇದನ್ನೂ ಓದಿ: 

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸತತವಾಗಿ 150ಕ್ಕೂ ಹೆಚ್ಚು ರನ್‌ಗಳ ಸಾಧನೆ:
ಕುಮಾರ ಸಂಗಕ್ಕರ: 4 (2007)
ವ್ಯಾಲಿ ಹಮ್ಮಾಂಡ್: 3 (1928-29)
ಡಾನ್ ಬ್ರಾಡ್ಮನ್: 3 (1937)
ಜಹೀರ್ ಅಬ್ಬಾಸ್: 3 (1982-93)
ಮುದಸ್ಸಾರ್ ನಜರ್: 3 (1983)
ಟಾಮ್ ಲೇಥಮ್: 3 (2018-19)
ಜೋ ರೂಟ್: 3 (2021)

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು