ನಾಟಿಂಗ್‌ಹ್ಯಾಂ: ಇಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ 303 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಭಾರತಕ್ಕೆ 209 ರನ್ ಗುರಿನೀಡಿದೆ.
ಮೊದಲ ಇನಿಂಗ್ಸ್‌ನಲ್ಲಿ 95 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಆಂಗ್ಲರಿಗೆ ರೋರಿ ಬರ್ನ್ಸ್(18), ಡಾಮ್ ಸಿಬ್ಲೆ(28) ಉತ್ತಮ ಆರಂಭ ನೀಡಿದರು. ಇವರಿಬ್ಬರ ನಿರ್ಗಮನದ ಬಳಿಕ ನಾಯಕ ಜೋ ರೂಟ್ 109 ರನ್ ಸಿಡಿಸಿ ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡಿದರು. ಜೋ ರೂಟ್‌ಗೆ ಉತ್ತಮ ಸಾಥ್ ನೀಡಿದ ಜಾನಿ ಬೆಸ್ಟೋ 30 ಸ್ಯಾಮ್ ಕರನ್ 32 ರನ್ ಗಳಿಸಿದರು.
ಭಾರತದ ಬೌಲರ್‌ಗಳ ಪೈಕಿ ಜಸ್‌ಪ್ರೀತ್ ಬೂಮ್ರಾ 64 ರನ್ ನೀಡಿ 5 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ತಲಾ 2 ವಿಕೆಟ್ ಪಡೆದರು.
ಇದಕ್ಕೂ ಮುನ್ನ ಭಾರತ ತಂಡ ತನ್ನ ಮೊದಲ ಇನಿಂಗ್ಸ್ ಅನ್ನು 278 ರನ್‌ಗೆ ಆಲೌಟ್ ಆಗಿತ್ತು. ಇಂಗ್ಲೆಂಡ್ ತಂಡ 183 ರನ್‌ಗೆ ಮೊದಲ ಇನಿಂಗ್ಸ್ ಮುಗಿಸಿತ್ತು.
ಸಂಕ್ಷಿಪ್ತ ಸ್ಕೋರ್:
ಇಂಗ್ಲೆಂಡ್: 183 & 303
ಭಾರತ: 278
ಜೋ ರೂಟ್ – 109
ಜಸ್‌ಪ್ರೀತ್ ಬೂಮ್ರಾ : 64/5
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.