ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG: ಕೊಹ್ಲಿ, ಅಶ್ವಿನ್ ಫಿಫ್ಟಿ; 400 ಗಡಿ ದಾಟಿದ ಭಾರತದ ಮುನ್ನಡೆ

Last Updated 15 ಫೆಬ್ರುವರಿ 2021, 8:59 IST
ಅಕ್ಷರ ಗಾತ್ರ

ಚೆನ್ನೈ: ನಾಯಕ ವಿರಾಟ್ ಕೊಹ್ಲಿ ಹಾಗೂ ಆರ್. ಅಶ್ವಿನ್ ಆಕರ್ಷಕ ಅರ್ಧಶತಕಗಳ ನೆರವಿನಿಂದ ಪ್ರವಾಸಿ ಇಂಗ್ಲೆಂಡ್ ವಿರುದ್ಧ ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಭಾರತ ತಿರುಗೇಟು ನೀಡಿದೆ.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಆರಂಭಿಕ ಕುಸಿತಕ್ಕೊಳಗಾದರೂ ಕೊಹ್ಲಿ, ಅಶ್ವಿನ್ ಅಮೋಘ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ಬೃಹತ್ ಮುನ್ನಡೆ ಗಳಿಸುವಲ್ಲಿ ಯಶಸ್ವಿಯಾಗಿದೆ.

ಮೂರನೇ ದಿನದಾಟದ ಟೀ ವಿರಾಮದ ಹೊತ್ತಿಗೆ ಭಾರತ ತಂಡವು ದ್ವಿತೀಯ ಇನ್ನಿಂಗ್ಸ್‌ನಲ್ಲಿ 73 ಓವರ್‌ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿದೆ. ಇದರೊಂದಿಗೆ 416 ರನ್‌ಗಳ ಒಟ್ಟು ಮುನ್ನಡೆ ಗಳಿಸಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 195 ರನ್‌ಗಳ ಬೃಹತ್ ಮುನ್ನಡೆ ಪಡೆದಿತ್ತು. ಬೌಲರ್‌ಗಳಿಗೆ ನೆರವಾಗುವ ಪಿಚ್‌ನಲ್ಲಿ ಇಂಗ್ಲೆಂಡ್ ಪಾಲಿಗೆ ರನ್ ಚೇಸ್ ಮಾಡುವುದು ಕಷ್ಟಕರವೆನಿಸಲಿದೆ ಎಂದೇ ಅಂದಾಜಿಸಲಾಗಿದೆ.

ಒಂದು ವಿಕೆಟ್ ನಷ್ಟಕ್ಕೆ 54 ರನ್ ಎಂಬ ಮೊತ್ತದಿಂದ ಬ್ಯಾಟಿಂಗ್ ಮುಂದುವರಿಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ಚೇತೇಶ್ವರ ಪೂಜಾರ (7) ರನೌಟ್ ಆದರು. ಮೊದಲ ಇನ್ನಿಂಗ್ಸ್‌ನ ಶತಕವೀರ ರೋಹಿತ್ ಶರ್ಮಾ (26), ಬರ್ತ್ ಡೇ ಬಾಯ್ಇಂಗ್ಲೆಂಡ್ ವಿಕೆಟ್ ಕೀಪರ್ ಬೆನ್ ಫೋಕ್ಸ್ ಅತ್ಯುತ್ತಮ ಸ್ಟಂಪಿಂಗ್‌ಗೆ ಬಲಿಯಾದರು.

ರಿಷಭ್ ಪಂತ್ (8) ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದು ಬಂದರೂ ಯೋಜನೆ ಫಲಿಸಲಿಲ್ಲ. ಉಪನಾಯಕ ಅಜಿಂಕ್ಯ ರಹಾನೆ (10) ಸಹ ನಿರಾಸೆ ಮೂಡಿಸಿದರು. ಚೊಚ್ಚಲ ಪಂದ್ಯವನ್ನಾಡುತ್ತಿರುವ ಅಕ್ಷರ್ ಪಟೇಲ್ (7) ಬ್ಯಾಟಿಂಗ್‌ನಲ್ಲಿ ಸೈ ಎನಿಸಲಿಲ್ಲ.

ಇನ್ನೊಂದೆಡೆ ಮೊದಲ ಇನ್ನಿಂಗ್ಸ್‌ನಲ್ಲಿ ಡಕ್ ಔಟ್ ಆಗಿರುವ ನಾಯಕ ವಿರಾಟ್ ಕೊಹ್ಲಿ ಮತ್ತು ಆರ್. ಅಶ್ವಿನ್ ತಂಡಕ್ಕೆ ಆಸರೆಯಾದರು. ಒಂದು ಹಂತದಲ್ಲಿ 106ಕ್ಕೆ ಆರು ವಿಕೆಟ್ ಕಳೆದುಕೊಂಡಿದ್ದ ಭಾರತ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಹಾಗೂ ಅಶ್ವಿನ್ ಏಳನೇ ವಿಕೆಟ್‌ಗೆ ಅಮೂಲ್ಯ 96 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾಗುವ ಮೂಲಕ ಬೃಹತ್ ಮುನ್ನಡೆ ಗಳಿಸುವಲ್ಲಿ ನೆರವಾದರು.

ಆಂಗ್ಲರ ಬೌಲರ್‌ಗಳನ್ನು ದಿಟ್ಟವಾಗಿ ಎದುರಿಸಿದ ಕೊಹ್ಲಿ, 149 ಎಸೆತಗಳಲ್ಲಿ ಏಳು ಬೌಂಡರಿಗಳಿಂದ 62 ರನ್ ಗಳಿಸಿದರು. ಅವರಿಗೆ ತಕ್ಕ ಸಾಥ್ ನೀಡಿದಅಶ್ವಿನ್ 103 ಎಸೆತಗಳಲ್ಲಿ ಒಂಬತ್ತು ಬೌಂಡರಿ ನೆರವಿನಿಂದ 63 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಈ ನಡುವೆ ಕುಲ್‌ದೀಪ್ ಯಾದವ್ (3) ವಿಕೆಟ್ ನಷ್ಟವಾಯಿತು. ಇಶಾಂತ್ ಶರ್ಮಾ (0*) ಕ್ರೀಸಿನಲ್ಲಿದ್ದಾರೆ.

ಇಂಗ್ಲೆಂಡ್ ಪರ ಮೊಯಿಲ್ ಅಲಿ ನಾಲ್ಕು ಮತ್ತು ಜ್ಯಾಕ್ ಲೀಚ್ ಮೂರು ವಿಕೆಟ್ ಕಿತ್ತು ಮಿಂಚಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT