ಶನಿವಾರ, 27 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG: ಅಂತಿಮ ಟೆಸ್ಟ್ ಪಂದ್ಯಕ್ಕೆ ಕೋವಿಡ್ ಕರಿನೆರಳು

Last Updated 9 ಸೆಪ್ಟೆಂಬರ್ 2021, 12:09 IST
ಅಕ್ಷರ ಗಾತ್ರ

ಮ್ಯಾಂಚೆಸ್ಟರ್: ಶುಕ್ರವಾರದಂದು ಆರಂಭವಾಗಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟೆಸ್ಟ್ ಪಂದ್ಯಕ್ಕೆ ಕೋವಿಡ್ ಕರಿನೆರಳು ಆವರಿಸಿದೆ.

ಭಾರತ ಕ್ರಿಕೆಟ್ ತಂಡದ ಜೂನಿಯರ್ ಫಿಸಿಯೊ ಯೋಗೆೇಶ್ ಪರ್ಮಾರ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಇದರಿಂದಾಗಿ ಟೀಮ್ ಇಂಡಿಯಾವು ತನ್ನ ಅಭ್ಯಾಸದ ಅವಧಿಯನ್ನು ರದ್ದುಗೊಳಿಸಿದೆ.

ಯೋಗೇಶ್ ಪರ್ಮಾರ್‌ಗೆ ಕೋವಿಡ್ ಸೋಂಕು ತಗುಲಿರುವುದನ್ನು ಬಿಸಿಸಿಐ ಖಚಿತಪಡಿಸಿದೆ.

ಟೀಮ್ ಇಂಡಿಯಾ ಆಟಗಾರರಲ್ಲಿ ಕೊಠಡಿಯಲ್ಲೇ ಉಳಿದುಕೊಳ್ಳಲು ಸೂಚಿಸಲಾಗಿದ್ದು, ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿದೆ. ಇದರ ವರದಿ ಶುಕ್ರವಾರದಂದೇ ಲಭ್ಯವಾಗುವ ನಿರೀಕ್ಷೆಯಿದೆ.

ಓವಲ್ ಟೆಸ್ಟ್ ಸಂದರ್ಭದಲ್ಲಿ ಮುಖ್ಯ ತರಬೇತುದಾರ ರವಿಶಾಸ್ತ್ರಿ ಅವರಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನ ಫಿಸಿಯೊ ನಿತಿನ್ ಪಟೇಲ್, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಪ್ರತ್ಯೇಕವಾಸದಲ್ಲಿರಲು ಸೂಚಿಸಲಾಗಿತ್ತು.

ಈ ಮಧ್ಯೆ ಹೆಚ್ಚುವರಿ ಫಿಸಿಯೊ ಒದಗಿಸುವಂತೆ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿಗೆ ಬಿಸಿಸಿಐ ವಿನಂತಿ ಮಾಡಿದೆ ಎಂಬುದು ತಿಳಿದು ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT