ಗುರುವಾರ , ಮೇ 26, 2022
31 °C

IND vs ENG: ರಿಷಭ್ ಪಂತ್ ಅಜೇಯ 58; ಭಾರತ 329ಕ್ಕೆ ಆಲೌಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಅಮೋಘ ಶತಕ (161) ಮತ್ತು ಅಜಿಂಕ್ಯ ರಹಾನೆ (67) ಹಾಗೂ ರಿಷಭ್ ಪಂತ್ (58*) ಆಕರ್ಷಕ ಅರ್ಧಶತಕದ ಹೊರತಾಗಿಯೂ ಟೀಮ್ ಇಂಡಿಯಾ 329 ರನ್‌ಗಳಿಗೆ ಆಲೌಟ್ ಆಗಿದೆ. 

ಆರು ವಿಕೆಟ್ ನಷ್ಟಕ್ಕೆ 300 ರನ್ ಎಂಬ ಮೊತ್ತದಿಂದ ದಿನದಾಟ ಮುಂದುವರಿಸಿದ ಭಾರತ ಮತ್ತಷ್ಟು 29 ರನ್ ಗಳಿಸುವಷ್ಟರಲ್ಲಿ ಉಳಿದಿರುವ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು 95.5 ಓವರ್‌ಗಳಲ್ಲಿ 329 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. 

ಎರಡನೇ ದಿನದಾಟದಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ರಿಷಭ್ ಪಂತ್ ಅಜೇಯ ಅರ್ಧಶತಕ  ಸಾಧನೆ ಮಾಡಿದರು. ಆದರೆ ವಿಕೆಟ್‌ನ ಮತ್ತೊಂದು ತುದಿಯಿಂದ ಉತ್ತಮ ಬೆಂಬಲ ಸಿಗದೇ ನಿರಾಸೆ ಅನುಭವಿಸಿದರು. 

ಇದನ್ನೂ ಓದಿ: 

77 ಎಸೆತಗಳನ್ನು ಎದುರಿಸಿದ ಪಂತ್ ಏಳು ಬೌಂಡರಿ ಹಾಗೂ ಮೂರು ಸಿಕ್ಸರ್‌ಗಳ ನೆರವಿನಿಂದ 67 ರನ್ ಗಳಿಸಿ ಔಟಾಗದೆ ಉಳಿದರು. ಇನ್ನುಳಿದಂತೆ ಚೊಚ್ಚಲ ಪಂದ್ಯವನ್ನಾಡುತ್ತಿರುವ ಅಕ್ಷರ್ ಪಟೇಲ್ (5), ಇಶಾಂತ್ ಶರ್ಮಾ (0), ಕುಲ್‌ದೀಪ್ ಯಾದವ್ (0) ಹಾಗೂ ಮೊಹಮ್ಮದ್ ಸಿರಾಜ್ (4) ನಿರಾಸೆ ಮೂಡಿಸಿದರು. 

ಇಂಗ್ಲೆಂಡ್ ಪರ ಮೊಯಿನ್ ಅಲಿ ನಾಲ್ಕು, ಒಲ್ಲಿ ಸ್ಟೋನ್ ಮೂರು, ಜ್ಯಾಕ್ ಲೀಚ್ ಎರಡು ಮತ್ತು ನಾಯಕ ಜೋ ರೂಟ್ ಒಂದು ವಿಕೆಟ್ ಕಬಳಿಸಿದರು. 

ಇದನ್ನೂ ಓದಿ: 

ಈ ಮುನ್ನ ಮೊದಲ ದಿನದಾಟದಲ್ಲಿ ಆರಂಭಿಕ ರೋಹಿತ್ ಶರ್ಮಾ ಆಕರ್ಷಕ ಶತಕ ಸಾಧನೆ (161) ಮಾಡಿದ್ದರು. ಉಪನಾಯಕ ಅಜಿಂಕ್ಯ ರಹಾನೆ ಅರ್ಧಶತಕದ (67) ಬೆಂಬಲ ನೀಡಿದ್ದರು. ಇವರಿಬ್ಬರು ನಾಲ್ಕನೇ ವಿಕೆಟ್‌ಗೆ 162 ರನ್‌ಗಳ ಜೊತೆಯಾಟ ಕಟ್ಟಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು