ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG: ಮಾಜಿ ಕೋಚ್ ರವಿ ಶಾಸ್ತ್ರಿಗೆ ಶಾಂಪೇನ್ ಉಡುಗೊರೆಯಾಗಿ ನೀಡಿದ ಪಂತ್

ಅಕ್ಷರ ಗಾತ್ರ

ಮ್ಯಾಂಚೆಸ್ಟರ್: ಆಂಗ್ಲರ ನಾಡಿನಲ್ಲಿ ಭಾರತ ಕ್ರಿಕೆಟ್ ತಂಡವು ಮಗದೊಂದು ಸ್ಮರಣೀಯ ಏಕದಿನ ಸರಣಿ ಗೆಲುವು ದಾಖಲಿಸಿದೆ.

ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಅಂತರದ ಗೆಲುವು ದಾಖಲಿಸಿದ ಟೀಮ್ ಇಂಡಿಯಾ ಸರಣಿಯನ್ನು 2-1ರ ಅಂತರದಲ್ಲಿ ತನ್ನದಾಗಿಸಿಕೊಂಡಿದೆ.

ಏಕದಿನದಲ್ಲಿ ಚೊಚ್ಚಲ ಶತಕ ಗಳಿಸಿದ ರಿಷಭ್ ಪಂತ್ ಮತ್ತು ಪಂದ್ಯದಲ್ಲಿ ಅರ್ಧಶತಕ ಹಾಗೂ ನಾಲ್ಕು ವಿಕೆಟ್ ಕಬಳಿಸಿದ ಹಾರ್ದಿಕ್ ಪಾಂಡ್ಯ ಗೆಲುವಿನ ರೂವಾರಿ ಎನಿಸಿದರು. ಇವರಿಬ್ಬರು ಐದನೇವಿಕೆಟ್‌ಗೆ ಶತಕದ ಜೊತೆಯಾಟದಲ್ಲಿ ಭಾಗಿಯಾದರು.

ಗೆಲುವಿನ ಬಳಿಕ ಭಾರತದ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಪ್ರಶಸ್ತಿ ಪ್ರದಾನ ಸಮಾರಂಭದ ಕೊನೆಯಲ್ಲಿ ನಾಯಕ ರೋಹಿತ್ ಶರ್ಮಾ ಟ್ರೋಫಿ ಎತ್ತಿ ಹಿಡಿಯುತ್ತಿದ್ದಂತೆಯೇ ಶಾಂಪೇನ್ ಚಿಮ್ಮಿಸಿದ ತಂಡದ ಆಟಗಾರರು ಸ್ಮರಣೀಯ ಸಾಧನೆಯ ಆನಂದದಾಯಕ ಕ್ಷಣವನ್ನು ಆಚರಿಸಿಕೊಂಡರು.

ಈ ನಡುವೆ ಮಾಜಿ ಕೋಚ್ ರವಿ ಶಾಸ್ತ್ರಿ ಬಳಿ ತೆರಳಿದ ರಿಷಭ್ ಪಂತ್, ಪಂದ್ಯಶ್ರೇಷ್ಠ ಪ್ರಶಸ್ತಿಯಾಗಿದೊರಕಿದ ಶಾಂಪೇನ್ ಬಾಟಲಿಯನ್ನು ಉಡುಗೊರೆಯಾಗಿ ನೀಡಿದರು. ಇದನ್ನು ರವಿಶಾಸ್ತ್ರಿ ಸಂತೋಷದಿಂದಲೇ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗ್ಯಾಲರಿಯಲ್ಲಿದ್ದ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ಈ ಮೊದಲು ಮಾಜಿ ನಾಯಕ ವಿರಾಟ್ ಕೊಹ್ಲಿ ಸಹ ರವಿ ಶಾಸ್ತ್ರಿಗೆ ಶಾಂಪೇನ್ ಬಾಟಲಿ ಆಫರ್ ಮಾಡುತ್ತಿರುವ ಚಿತ್ರವೂ ವೈರಲ್ ಆಗಿದೆ.

ಭಾರತ-ಇಂಗ್ಲೆಂಡ್ ಸರಣಿಯಲ್ಲಿ ರವಿ ಶಾಸ್ತ್ರಿ ವೀಕ್ಷಕ ವಿವರಣೆಗಾರನಾಗಿ ಕೆಲಸನಿಭಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT