ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌‌ನಿಂದ ಚೇತರಿಸಿಕೊಂಡಿರುವ ಪಂತ್ ಟೀಮ್ ಇಂಡಿಯಾದ ಬಯೋಬಬಲ್‌ಗೆ ಸೇರ್ಪಡೆ

ಅಕ್ಷರ ಗಾತ್ರ

ಡರ್‌ಹ್ಯಾಮ್: ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿರುವ ವಿಕೆಟ್ ಕೀಪರ್ ಎಡಗೈ ಬ್ಯಾಟ್ಸ್‌ಮನ್ ರಿಷಭ್ ಪಂತ್, ಟೀಮ್ ಇಂಡಿಯಾ ಬಯೋಬಬಲ್‌ಗೆ ಸೇರ್ಪಡೆಯಾಗಿದ್ದಾರೆ.

ಈ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಅಧಿಕೃತ ಟ್ವಿಟರ್ ಪುಟದಲ್ಲಿ ಮಾಹಿತಿ ನೀಡಿದ್ದು, ರಿಷಭ್ ಪಂತ್ ಚಿತ್ರವನ್ನು ಹಂಚಿಕೊಂಡಿದೆ.

ಬ್ರಿಟನ್ ಮಾರ್ಗಸೂಚಿಗಳ ಪ್ರಕಾರ 10 ದಿನಗಳ ಪ್ರತ್ಯೇಕವಾಸದಲ್ಲಿದ್ದ ಪಂತ್ ಸೋಮವಾರದಂದು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದರು.

ಸೌತಾಂಪ್ಟನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಬಳಿಕ 20 ದಿನಗಳ ವಿಶ್ರಾಂತಿಯ ಅವಧಿಯ ವೇಳೆ ಪಂತ್ ಅವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಈ ಮಧ್ಯೆ ಯುರೋ ಕಪ್ ಪಂದ್ಯಾವಳಿಯನ್ನು ವೀಕ್ಷಿಸಲು ತೆರಳಿದ್ದರು.

ರಿಷಭ್ ಪಂತ್ ಅವರಲ್ಲಿ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಬಿಸಿಸಿಐ ವೈದ್ಯಕೀಯ ತಂಡವು ಸೂಕ್ಷ್ಮ ನಿಗಾ ವಹಿಸಿತ್ತು.

ಭಾರತ ತಂಡದ ಥ್ರೋಡೌನ್ ಪರಿಣತ ದಯಾನಂದ ಗರಾನಿ ಅವರಿಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ, ಅಭಿಮನ್ಯು ಈಶ್ವರನ್ ಹಾಗೂ ಬೌಲಿಂಗ್ ಕೋಚ್ ಭರತ್ ಅರುಣ್ ಅವರನ್ನು ಐಸೋಲೇಷನ್‌ಗೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT