ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG 2nd Test: ರೋಹಿತ್ ಶತಕ; ಟೀ ವಿರಾಮಕ್ಕೆ ಭಾರತ 189/3

Last Updated 13 ಫೆಬ್ರುವರಿ 2021, 9:09 IST
ಅಕ್ಷರ ಗಾತ್ರ

ಚೆನ್ನೈ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಅಮೋಘ ಶತಕದ ಬೆಂಬಲದೊಂದಿಗೆ ಟೀಮ್ ಇಂಡಿಯಾ ಮೊದಲ ದಿನದಾಟದ ಟೀ ವಿರಾಮದ ಹೊತ್ತಿಗೆ 54 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿದೆ.

ಒಂದೆಡೆ ವಿಕೆಟ್ ಪತನಗೊಳ್ಳುತ್ತಿದ್ದರೂ ಸಮಯೋಚಿತ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ ಶರ್ಮಾ ಟೆಸ್ಟ್ ವೃತ್ತಿ ಜೀವನದಲ್ಲಿ ಏಳನೇ ಶತಕ ಸಾಧನೆ ಮಾಡಿದರು. ಈ ಎಲ್ಲ ಶತಕಗಳು ತವರು ಮೈದಾನದಲ್ಲಿ ದಾಖಲಿರುವುದು ವಿಶೇಷ.

ಆರಂಭದಲ್ಲೇ ಶುಭಮನ್ ಗಿಲ್ (0) ವಿಕೆಟ್ ಕಳೆದುಕೊಂಡ ಭಾರತ ಹಿನ್ನೆಡೆ ಅನುಭವಿಸಿತ್ತು. ಬಳಿಕ ಚೇತೇಶ್ವರ ಪೂಜಾರ (21) ಜೊತೆಗೆ 85 ರನ್‌ಗಳ ಅಮೂಲ್ಯ ಜೊತೆಯಾಟದಲ್ಲಿ ರೋಹಿತ್ ಭಾಗಿಯಾದರು.

ಆದರೆ ಪೂಜಾರ ವಿಕೆಟ್ ಪತನದ ಬೆನ್ನಲ್ಲೇ ನಾಯಕ ವಿರಾಟ್ ಕೊಹ್ಲಿ ಸಹ ಶೂನ್ಯಕ್ಕೆ ವಿಕೆಟ್ ಒಪ್ಪಿಸುವುದರೊಂದಿಗೆ 86 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡ ಭಾರತ ಸಂಕಷ್ಟಕ್ಕೆ ಸಿಲುಕಿತ್ತು.

ಅತ್ತ ಆಂಗ್ಲರ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಿದರು. ಇವರಿಗೆ ಉಪನಾಯಕ ಅಜಿಂಕ್ಯ ರಹಾನೆ ಸಾಥ್ ನೀಡಿದರು. ಅಲ್ಲದೆ ಮುರಿಯದ ನಾಲ್ಕನೇ ವಿಕೆಟ್‌ಗೆ ಶತಕದ ಜೊತೆಯಾಟ ನೀಡಿದ್ದಾರೆ.

ರೋಹಿತ್ ಅಜೇಯ 132 ಹಾಗೂ ರಹಾನೆ 36 ರನ್ ಗಳಿಸಿ ಕ್ರೀಸಿನಲ್ಲಿದ್ದಾರೆ. ಇಂಗ್ಲೆಂಡ್ ಪರ ಒಲ್ಲಿ ಸ್ಟೋನ್, ಜ್ಯಾಕ್ ಲೀಚ್ ಹಾಗೂ ಮೊಯಿನ್ ಅಲಿ ತಲಾ ಒಂದು ವಿಕೆಟನ್ನು ಹಂಚಿಕೊಂಡರು.

ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 227 ರನ್ ಅಂತರದ ಬೃಹತ್ ಗೆಲುವು ದಾಖಲಿಸಿರುವ ಇಂಗ್ಲೆಂಡ್ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT