'ರಜೆ ಮುಗಿದಿದೆ, ಈಗ ಕೆಲಸ ಶುರು': ಅಭ್ಯಾಸಕ್ಕೆ ಮರಳಿದ ಹಿಟ್‌ಮ್ಯಾನ್

ಡರ್‌ಹ್ಯಾಮ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ಆಟಗಾರರು, ಬಹುನಿರೀಕ್ಷಿತ ಟೆಸ್ಟ್ ಸರಣಿಗೂ ಮುನ್ನ ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, 'ರಜೆ ಮುಗಿದಿದೆ, ಈಗ ಕೆಲಸ ಶುರು' ಎಂದು ಹೇಳಿದ್ದಾರೆ.
ಇದನ್ನೂ ಓದಿ: ಗೆಳತಿ ಅಂಜುಮ್ ಖಾನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿವಂ ದುಬೆ
ಕೋವಿಡ್ ಹಿನ್ನೆಲೆಯಲ್ಲಿ ಆಟಗಾರರ ಸುರಕ್ಷತೆಗಾಗಿ ಗರಿಷ್ಠ ಆದ್ಯತೆ ಕೊಡಲಾಗಿದ್ದು, ಬಯೋಬಬಲ್ ಜೀವರಕ್ಷಕ ವಲಯ ರೂಪಿಸಲಾಗಿದೆ.
चलो भाई, छुट्टी खत्म… अब काम शुरू! 👊🏻🇮🇳 pic.twitter.com/qk4ovSGq3v
— Rohit Sharma (@ImRo45) July 16, 2021
ಕಳೆದ ತಿಂಗಳು ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ಟೀಮ್ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಸೋತು ರನ್ನರ್-ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.
ಈಗ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ.
ನಾಯಕ ವಿರಾಟ್ ಕೊಹ್ಲಿ ಸಹ ಕೆಎಲ್ ರಾಹುಲ್, ಶಾರ್ದೂಲ್ ಠಾಕೂರ್ ಮತ್ತು ಜಸ್‌ಪ್ರೀತ್ ಬೂಮ್ರಾ ಜೊತೆಗಿನ ಚಿತ್ರವನ್ನು ಹಂಚಿದ್ದಾರೆ.
Back at it 🏏🇮🇳 pic.twitter.com/HPsBXif2bm
— Virat Kohli (@imVkohli) July 16, 2021
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ), ಟೀಮ್ ಇಂಡಿಯಾ ಆಟಗಾರರು ತರಬೇತಿ ನಡೆಸುತ್ತಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 4ರಂದು ನಡೆಯಲಿದೆ. ಇದರೊಂದಿಗೆ ಐಸಿಸಿ ವಿಶ್ವ ಚಾಂಪಿಯನ್‌ಶಿಪ್‌ನ ಎರಡನೇ ಆವೃತ್ತಿ ಆರಂಭವಾಗಲಿದೆ.
Strength and mobility session for #TeamIndia as we regroup in Durham with preparations underway for the #ENGvIND Test series 💪 💪
P.S. Snippets from @coach_rsridhar's birthday celebrations 🎂 👏 pic.twitter.com/bQX17ZUF1u
— BCCI (@BCCI) July 17, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.