IND vs ENG: ರೋಹಿತ್‌ಗೆ ಕೋವಿಡ್; ಬುಮ್ರಾಗೆ ನಾಯಕ ಪಟ್ಟ: ವರದಿ

ಎಜ್‌ಬಾಸ್ಟನ್: ಕೋವಿಡ್‌ನಿಂದ ಬಳಲುತ್ತಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.
ರೋಹಿತ್ ಅನುಪಸ್ಥಿತಿಯಲ್ಲಿ ಜಸ್‌ಪ್ರೀತ್ ಬೂಮ್ರಾ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಟೀಮ್ ಮೀಟಿಂಗ್‌ನಲ್ಲಿ ಬೂಮ್ರಾಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ದೀಪಕ್ ಹೂಡಾ ಶತಕ: ಐರ್ಲೆಂಡ್ ವಿರುದ್ಧ ಭಾರತಕ್ಕೆ ಟಿ–20 ಸರಣಿ ಜಯ
ಈ ಮೂಲಕ ಕಪಿಲ್ ದೇವ್ ಬಳಿಕ ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಿದ ಮೊದಲ ವೇಗದ ಬೌಲರ್ ಎಂಬ ಖ್ಯಾತಿಗೆ ಬೂಮ್ರಾ ಪಾತ್ರರಾಗಲಿದ್ದಾರೆ.
Rohit Sharma will miss the fifth test (against England) and Jasprit Bumrah will lead the Indian side. He has been informed about this in the team meeting: Sources
(File Pic) pic.twitter.com/AvJRstH6Lq
— ANI (@ANI) June 29, 2022
ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟೆಸ್ಟ್ ಪಂದ್ಯವು ಎಜ್‌ಬಾಸ್ಟನ್ ಮೈದಾನದಲ್ಲಿ ಜುಲೈ 1ರಿಂದ ಆರಂಭವಾಗಲಿದೆ.
ಕಳೆದ ಭಾನುವಾರ ರೋಹಿತ್ ಶರ್ಮಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರೀಗ ತಂಡವು ತಂಗಿರುವ ಹೋಟೆಲ್ನಲ್ಲಿ ಪ್ರತ್ಯೇಕವಾಸದಲ್ಲಿದ್ದಾರೆ.
ರೋಹಿತ್ ಅವರ ಸ್ಥಾನ ತುಂಬಲು ಕನ್ನಡಿಗ ಮಯಂಕ್ ಅಗರವಾಲ್ ಅವರಿಗೆ ಬುಲಾವ್ ನೀಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.