ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG T20I: ಟಿ20 ಕಣಕ್ಕೆ ಮರಳಿದ ವಿರಾಟ್ ಕೊಹ್ಲಿ

Last Updated 8 ಜುಲೈ 2022, 19:30 IST
ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಮ್: ಐದು ತಿಂಗಳುಗಳಿಂದ ಅಂತರರಾಷ್ಟ್ರೀಯ ಟಿ20 ಪಂದ್ಯಗಳಿಂದ ದೂರವೇ ಉಳಿದಿರುವ ವಿರಾಟ್ ಕೊಹ್ಲಿ ಶನಿವಾರ ಎಜ್‌ಬಾಸ್ಟನ್‌ ಅಂಗಳದಲ್ಲಿ ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಗುರುವಾರ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಅವರು ಆಡಿರಲಿಲ್ಲ. ಕಳೆದ ಐದು ತಿಂಗಳುಗಳ ಅವಧಿಯಲ್ಲಿ ಐಪಿಎಲ್ ಬಿಟ್ಟರೆ ಬೇರೆ ಯಾವುದೇ ಟಿ20 ಪಂದ್ಯಗಳಲ್ಲಿ ಆಡಿಲ್ಲ. ಫೆಬ್ರುವರಿಯಲ್ಲಿ ಎರಡು ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಆಡಿದ್ದರು.

ತಂಡದ ವಿಶ್ರಾಂತಿ ನೀತಿಯಿಂದಾಗಿ ಅನುಭವಿ ಆಟಗಾರರು ಹೆಚ್ಚು ರಜೆಗಳನ್ನು ಪಡೆಯುತ್ತಿದ್ದಾರೆ. ಇದರಿಂದಾಗಿ ಯುವ ಆಟಗಾರರಿಗೆ ಅವಕಾಶಗಳು ಸಿಗುತ್ತಿವೆ. ಆದರೆ ಈಗ ವಿರಾಟ್‌ ಮರಳಿದರೆ ದೀಪಕ್ ಹೂಡಾ ವಿಶ್ರಾಂತಿ ಪಡೆಯಬೇಕಾಗಬಹುದು. ಹೂಡಾ ಉತ್ತಮ ಲಯದಲ್ಲಿದ್ದಾರೆ. ಆದ್ದರಿಂದ ಅವರನ್ನು ಉಳಿಸಿಕೊಂಡರೆ, ಕೊಹ್ಲಿ ಮತ್ತು ಇಶಶಾನ್ ಕಿಶನ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಆಗ ಋತುರಾಜ್ ವಿಶ್ರಾಂತಿ ಪಡೆಯಬಹುದು.

ಮೊದಲ ಪಂದ್ಯದಲ್ಲಿ ಗೆದ್ದಿರುವ ಭಾರತ ತಂಡವು ಈ ಪಂದ್ಯ ಜಯಿಸಿ ಸರಣಿ ಕೈವಶ ಮಾಡಿಕೊಳ್ಳುವ ಹುಮ್ಮಸ್ಸಿನಲ್ಲಿದೆ.

ಪಂದ್ಯ ಆರಂಭ: ರಾತ್ರಿ 7. ನೇರಪ್ರಸಾರ:ಸೋನಿ ಲಿವ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT