ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 286 ರನ್‌ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್‌ಗೆ ಪಂದ್ಯ ಗೆಲ್ಲಲು 482 ರನ್ ಗುರಿ ನೀಡಿದೆ.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಆರಂಭಿಕ ಕುಸಿತಕ್ಕೊಳಗಾದರೂ ಆರ್.ಅಶ್ವಿನ್ ಆಕರ್ಷಕ ಶತಕ (106), ನಾಯಕ ವಿರಾಟ್ ಕೊಹ್ಲಿ (62) ಅರ್ಧಶತಕದ ನೆರವಿನಿಂದ ಮೂರನೇ ದಿನದಾಟದ ಕೊನೆಯ ಅವಧಿಯಲ್ಲಿ ಭಾರತ ತಂಡವು ಉತ್ತಮ ಮೊತ್ತ ಪೇರಿಸಿತು.

ಓದಿ:Ashwin Century: ಒಂದೇ ಟೆಸ್ಟ್ನಲ್ಲಿ ಶತಕ, 5 ವಿಕೆಟ್: 3 ಬಾರಿ ಅಶ್ವಿನ್ ಸಾಧನೆ

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 195 ರನ್‌ಗಳ ಬೃಹತ್ ಮುನ್ನಡೆ ಪಡೆದಿತ್ತು. ಬೌಲರ್‌ಗಳಿಗೆ ನೆರವಾಗುವ ಪಿಚ್‌ನಲ್ಲಿ ಇಂಗ್ಲೆಂಡ್ ಪಾಲಿಗೆ ರನ್ ಚೇಸ್ ಮಾಡುವುದು ಕಷ್ಟಕರವಾಗಲಿದೆ ಎಂದು ಕ್ರಿಕೆಟ್ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಭರ್ಜರಿ ಗೆಲುವು ಸಾಧಿಸಿತ್ತು.

ಅಶ್ವಿನ್ ಸಾಧನೆ

ದ್ವಿತೀಯ ಇನ್ನಿಂಗ್ಸ್‌ನ ಮೊದಲ ಹಂತದಲ್ಲಿ ಕುಸಿತ ಕಂಡಿದ್ದ ತಂಡಕ್ಕೆ ಅಶ್ವಿನ್ ಆಸರೆಯಾದರು. ಆಕರ್ಷಕ ಬ್ಯಾಟಿಂಗ್ ಮಾಡಿದ ಅವರು 148 ಎಸೆತಗಳಲ್ಲಿ 106 ರನ್ ಗಳಿಸಿ ತಂಡದ ಮೊತ್ತ ಹೆಚ್ಚಿಸುವಲ್ಲಿ ಗಮನಾರ್ಹ ಕೊಡುಗೆ ನೀಡಿದರು. ಜತೆಗೆ, ಒಂದೇ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಹಾಗೂ ಶತಕದ ಸಾಧನೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾದರು. ಅಶ್ವಿನ್ ಅವರು ಈ ಸಾಧನೆ ಮಾಡುತ್ತಿರುವುದು ಇದು ಮೂರನೇ ಬಾರಿ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.