IND Vs ENG ಟೆಸ್ಟ್ಗೆ ಭಾರತ ತಂಡ ಪ್ರಕಟ: ಕೊಹ್ಲಿ, ಹಾರ್ದಿಕ್ ಇನ್, ನಟರಾಜನ್ ಔಟ್

ನವದೆಹಲಿ: ಇಂಗ್ಲೆಂಡ್ ವಿರುದ್ಧ ಭಾರತದಲ್ಲಿ ನಡೆಯಲಿರುವ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲೆರಡು ಪಂದ್ಯಗಳಿಗೆ ಭಾರತ ತಂಡದ ಆಟಗಾರರ ಪಟ್ಟಿಯನ್ನು ಬಿಸಿಸಿಐ ಮಂಗಳವಾರ ಸಂಜೆ ಬಿಡುಗಡೆ ಮಾಡಿದೆ.
ರಜೆಯಲ್ಲಿರುವ ನಾಯಕ ವಿರಾಟ್ ಕೊಹ್ಲಿ, ವೇಗದ ಬೌಲರ್ ಇಶಾಂತ್ ಶರ್ಮಾ, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಿದ್ದಾರೆ. ತಮಿಳುನಾಡಿನ ವೇಗಿ ಟಿ. ನಟರಾಜನ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಅಕ್ಷರ್ ಪಟೇಲ್ ಅವರಿಗೆ ಸ್ಥಾನ ಕಲ್ಪಿಸಲಾಗಿದೆ.
ಇದನ್ನೂ ಓದಿ: ಕೊಹ್ಲಿ ಇಲ್ಲದೆ...: ಆಸ್ಟ್ರೇಲಿಯಾ ಮಾಜಿ ನಾಯಕರ ಭವಿಷ್ಯ ಸುಳ್ಳಾಗಿಸಿದ ಟೀಂ ಇಂಡಿಯಾ
26 ವರ್ಷ ವಯಸ್ಸಿನ ಅಕ್ಷರ್ ಪಟೇಲ್ ಅವರು ಇನ್ನಷ್ಟೇ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಬೇಕಿದೆ. 2018ರ ಫೆಬ್ರುವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಆಡಿದ್ದರು. 38 ಏಕದಿನ ಪಂದ್ಯಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ. ರವೀಂದ್ರ ಜಡೇಜ ಬದಲಿಗೆ ಅವರನ್ನು ಆಯ್ಕೆ ಮಾಡಲಾಗಿದೆ.
ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿಯ ನಾಯಕತ್ವ ವಹಿಸಿದ್ದ ಅಜಿಂಕ್ಯ ರಹಾನೆ ಉಪನಾಯಕನಾಗಿರಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ನಲ್ಲಿ ಉತ್ತಮ ಪ್ರದರ್ಶನ ತೋರಿರುವ ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.
ಇದನ್ನೂ ಓದಿ: IND vs AUS ಟೆಸ್ಟ್: ಭಾರತಕ್ಕೆ ಐತಿಹಾಸಿಕ ಗೆಲುವು, ಇಲ್ಲಿವೆ ಸ್ವಾರಸ್ಯಕರ ಸಂಗತಿ
ಗಾಯದ ಸಮಸ್ಯೆಯಿಂದ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ನಿಂದ ಹೊರಗುಳಿದಿದ್ದ ಆರ್. ಅಶ್ವಿನ್ ಅವರನ್ನೂ ತಂಡಕ್ಕೆ ಆಯ್ಕೆ ಮಾಡಲಾಗಿದೆ.
ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಇದಾಗಿದ್ದು, ಮೊದಲ ಪಂದ್ಯ ಫೆಬ್ರುವರಿ 5ರಿಂದ ಚೆನ್ನೈನಲ್ಲಿ ಆರಂಭವಾಗಲಿದೆ. ಎರಡನೇ ಪಂದ್ಯವೂ ಫೆಬ್ರುವರಿ 13–17ರ ವರೆಗೆ ಚೆನ್ನೈನಲ್ಲೇ ನಡೆಯಲಿದೆ. ಮೂರನೇ ಹಾಗೂ ನಾಲ್ಕನೇ ಪಂದ್ಯಗಳು ಅಹಮದಾಬಾದ್ನಲ್ಲಿ ಫೆಬ್ರುವರಿ 24–28 ಮತ್ತು ಮಾರ್ಚ್ 4–8ರ ವರೆಗೆ ನಡೆಯಲಿವೆ.
ಇದನ್ನೂ ಓದಿ: ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್, ರ್ಯಾಂಕಿಂಗ್ನಲ್ಲಿ ಭಾರತ ಜಿಗಿತ
ಟೆಸ್ಟ್ ಸರಣಿಯ ಬಳಿಕ ಐದು ಟಿ20, 3 ಏಕದಿನ ಪಂದ್ಯಗಳು ನಡೆಯಲಿವೆ.
ತಂಡ ಹೀಗಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ಮಯಂಕ್ ಅಗರವಾಲ್, ಅಜಿಂಕ್ಯ ರಹಾನೆ, ರಿಷಭ್ ಪಂತ್, ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ, ಕೆ.ಎಲ್.ರಾಹುಲ್, ಜಸ್ಪ್ರೀತ್ ಬೂಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಆರ್.ಅಶ್ವಿನ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್ ಹಾಗೂ ಅಕ್ಷರ್ ಪಟೇಲ್.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.