ಮಂಗಳವಾರ, ಏಪ್ರಿಲ್ 20, 2021
32 °C

IND vs ENG: ವಿರಾಟ್ ಕೊಹ್ಲಿ - ಬೆನ್ ಸ್ಟೋಕ್ಸ್ ನಡುವೆ ಮಾತಿನ ಚಕಮಕಿ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ನಾಯಕ ವಿರಾಟ್ ಕೊಹ್ಲಿ ಹಾಗೂ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಿಸಿ ಬಿಸಿ ವಾತಾವರಣಕ್ಕೆ ಕಾರಣವಾಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆತಿಥೇಯ ಭಾರತ ಹಾಗೂ ಪ್ರವಾಸಿ ಇಂಗ್ಲೆಂಡ್ ನಡುವಣ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಘಟನೆ ನಡೆದಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡವು ಆರಂಭಿಕ ಆಘಾತವನ್ನು ಎದುರಿಸಿತ್ತು. ಅಲ್ಲದೆ 30 ರನ್ ಗಳಿಸುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

 

 

 

ಈ ಹಂತದಲ್ಲಿ ಕ್ರೀಸಿಗಿಳಿದ ಬೆನ್ ಸ್ಟೋಕ್ಸ್ ಅವರಿಗೆ ಬೌನ್ಸರ್ ಎಸೆಯುವ ಮೂಲಕ ಮೊಹಮ್ಮದ್ ಸಿರಾಜ್ ಭೀತಿ ಮೂಡಿಸಿದ್ದರು. ಈ ಸಂದರ್ಭದಲ್ಲಿ ಸಿರಾಜ್‌ ವಿರುದ್ಧ ಸ್ಟೋಕ್ಸ್ ಶಬ್ದ ಪ್ರಯೋಗ ಮಾಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: 

 

ತಕ್ಷಣ ಬಲಗೈ ವೇಗಿಯ ಬೆಂಬಲಕ್ಕೆ ನಿಂತ ನಾಯಕ ವಿರಾಟ್ ಕೊಹ್ಲಿ, ಇಂಗ್ಲೆಂಡ್ ಆಟಗಾರ ಬೆನ್ ಸ್ಟೋಕ್ಸ್ ವಿರುದ್ಧ ವಾಗ್ವಾದಕ್ಕಿಳಿದರು.


ವಿರಾಟ್ ಕೊಹ್ಲಿ vs ಬೆನ್ ಸ್ಟೋಕ್ಸ್

ಪರಿಣಾಮ ಕೊಹ್ಲಿ-ಸ್ಟೋಕ್ಸ್ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಅಂಪೈರ್ ಮಧ್ಯೆ ಪ್ರವೇಶಿಸಿ ವಾತಾವರಣವನ್ನು ಶಾಂತಗೊಳಿಸಿದರು.

 

 

 

ವಿರಾಟ್ ಕೊಹ್ಲಿ ಹಾವಭಾವಗಳನ್ನು ಗಮನಿಸಿರುವ ಅಭಿಮಾನಿಗಳು, 'ವಿಂಟೇಜ್' ಶೈಲಿಗೆ ಮರಳಿದ್ದಾರೆ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇನ್ನು ಕೆಲವರು ಆಸ್ಟ್ರೇಲಿಯಾ ಸರಣಿಯಲ್ಲಿ ಸಿರಾಜ್ ಜನಾಂಗೀಯ ನಿಂದನೆ ಎದುರಿಸಿದ್ದಾಗ ವಿರಾಟ್ ಕೊಹ್ಲಿ ಅಲ್ಲಿರಬೇಕಿತ್ತು ಎಂದು ಹೇಳಿದ್ದಾರೆ. 

 

 

 

 

 

 

 

 

 

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು