ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG: ಮಗದೊಂದು ವಿಶಿಷ್ಟ ದಾಖಲೆ ಬರೆದ ಕಿಂಗ್ ಕೊಹ್ಲಿ

Last Updated 26 ಮಾರ್ಚ್ 2021, 14:42 IST
ಅಕ್ಷರ ಗಾತ್ರ

ಪುಣೆ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಏಕದಿನದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 10,000 ರನ್‌ಗಳ ಮೈಲುಗಲ್ಲು ತಲುಪಿದ ವಿಶಿಷ್ಟ ದಾಖಲೆಗೆ ಭಾಜನವಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸ್ಮರಣೀಯ ದಾಖಲೆ ಬರೆದರು.

ಅಲ್ಲದೆ ಏಕದಿನ ಕ್ರಿಕೆಟ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಕ್ರೀಸಿಗಿಳಿದು 10,000 ರನ್ ಪೂರೈಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.

ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅಗ್ರಸ್ಥಾನದಲ್ಲಿದ್ದು, 330 ಇನ್ನಿಂಗ್ಸ್‌ಗಳಲ್ಲಿ 12,662 ರನ್ ಪೇರಿಸಿದ್ದಾರೆ.

ಟೀಮ್ ಇಂಡಿಯಾ ಕಪ್ತಾನ ವಿರಾಟ್, ತಮ್ಮ 190ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕರ 238 ಇನ್ನಿಂಗ್ಸ್‌ಗಳಲ್ಲಿ 9,749 ರನ್ ಪೇರಿಸಿದ್ದರು. ಹಾಗೆಯೇ ನಾಲ್ಕನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾದ ಜ್ಯಾಕ್ ಕಾಲಿಸ್ 7,774 ರನ್ ಗಳಿಸಿದ್ದರು.

ಸರಣಿಯಲ್ಲಿ ಸತತ ಎರಡನೇ ಅರ್ಧಶತಕ ಬಾರಿಸಿರುವ ನಾಯಕ ವಿರಾಟ್ ಕೊಹ್ಲಿ 79 ಎಸೆತಗಳಲ್ಲಿ 66 ರನ್ ಗಳಿಸಿದ್ದರು. ಇದರಲ್ಲಿ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿದ್ದವು.

ಕಾಡಿದ ರಶೀದ್...
ಏತನ್ಮಧ್ಯೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂಬತ್ತನೇ ಬಾರಿಗೆ ಇಂಗ್ಲೆಂಡ್‌ನ ಸ್ಪಿನ್ನರ್ ಆದಿಲ್ ರಶೀದ್ ದಾಳಿಯಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಅವರನ್ನು ಅತಿ ಹೆಚ್ಚು ಬಾರಿ ಹೊರದಬ್ಬಿದ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಡ್‌ನ ಟಿಮ್ ಸೌಥಿ, ಕೊಹ್ಲಿ ಅವರನ್ನು ಅತಿ ಹೆಚ್ಚು 10 ಬಾರಿ ಔಟ್ ಮಾಡಿದ್ದಾರೆ. ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಮತ್ತು ಗ್ರೇಮ್ ಸ್ವಾನ್ ಕೂಡಾ ತಲಾ ಎಂಟು ಬಾರಿ ವಿರಾಟ್ ಕೊಹ್ಲಿ ಅವರನ್ನು ಹೊರದಬ್ಬಿದ್ದಾರೆ.

ಕುತೂಹಲದಾಯಕ ಸಂಗತಿಯೆಂದರೆ ಕೊಹ್ಲಿ 35 ರನ್ ಗಳಿಸಿದ್ದಾಗ ಆದಿಲ್ ರಶೀದ್ ದಾಳಿಯಲ್ಲೇ ಉಸ್ತುವಾರಿ ನಾಯಕ ಜೋಸ್ ಬಟ್ಲರ್ ಕ್ಯಾಚ್ ಕೈಚೆಲ್ಲಿದ್ದರು.

ಇತ್ತೀಚೆಗಷ್ಟೇ ಸಾಗಿದ ಟಿ20 ಸರಣಿಯಲ್ಲೂ ಕೊಹ್ಲಿ ಅವರನ್ನು ಎರಡು ಬಾರಿ ಹೊರದಬ್ಬುವಲ್ಲಿ ರಶೀದ್ ಯಶಸ್ವಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT