ಭಾನುವಾರ, ಏಪ್ರಿಲ್ 18, 2021
31 °C

IND vs ENG: 3ನೇ ಟಿ20: ಕೊಹ್ಲಿ ಅಬ್ಬರ, ಇಂಗ್ಲೆಂಡ್‌ಗೆ 157 ರನ್ ಟಾರ್ಗೆಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್‌ಗೆ 157 ರನ್ ಗುರಿ ನೀಡಿದೆ. ನಾಯಕ ವಿರಾಟ್ ಕೊಹ್ಲಿ ಅವರ ಜವಾಬ್ದಾರಿಯುತ 77 ರನ್ ನೆರವಿನಿಂದ ಭಾರತ ತಂಡ 156 ರನ್ ಗೌರವಾನ್ವಿತ ಮೊತ್ತ ಕಲೆ ಹಾಕಿದೆ.

ಟಾಸ್ ಸೋತು ಬ್ಯಾಟಿಂಗ್ ಅಹ್ವಾನ ಪಡೆದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಸತತ ಮೂರನೇ ಬಾರಿಗೆ ವಿಫಲರಾದ ಕೆ.ಎಲ್. ರಾಹುಲ್ ಶೂನ್ಯಕ್ಕೆ ನಿರ್ಗಮಿಸಿದರು. ಮಾರ್ಕ್ ವುಡ್ ಬೌಲಿಂಗ್‌ನಲ್ಲಿ ಬೋಲ್ಡ್ ಆಗಿ ನಿರ್ಗಮಿಸಿದರು.

ಸೂರ್ಯ ಕುಮಾರ್ ಬದಲಿಗೆ ತಂಡಕ್ಕೆ ಸೇರ್ಪಡೆಗೊಂಡಿದ್ದ ರೋಹಿತ್ ಶರ್ಮಾ 15 ರನ್ನಿಗೆ ಆಟ ಮುಗಿಸಿದರು. ಇಶಾನ್ ಕಿಶನ್ 4 ರನ್ ಮತ್ತು ರಿಷಬ್ ಪಂತ್ 25 ರನ್ ಮಾಡಿ ಪೆವಿಲಿಯನ್ ಸೇರಿಕೊಂಡರು.

ಒಂದೆಡೆ ವಿಕೆಟ್ ಹೋಗುತ್ತಿದ್ದರೂ ತಾಳ್ಮೆಯಿಂದ ಆಡಿದ ವಿರಾಟ್ ಕೊಹ್ಲಿ ಅಂತಿಮ ಓವರ್‌ಗಳಲ್ಲಿ ಬೌಲರ್‌ಗಳ ಬೆವರಿಳಿಸಿದರು. ಅಂತಿಮ ಓವರ್‌ಗಳಲ್ಲಿ ಅಬ್ಬರಿಸಿದ ನಾಯಕ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯಾ ಜೊತೆ ಸೇರಿ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. 18ನೇ ಓವರ್‌ನ ಮಾರ್ಕ್ ವುಡ್ ಬೌಲಿಂಗ್‌ನಲ್ಲಿ ಎರಡು ಸಿಕ್ಸರ್ ಮತ್ತು ಒಂದು ಬೌಂಡರಿ ಸಹಿತ 17 ರನ್ ಸಿಡಿಸಿದ ವಿರಾಟ್ ತಂಡದ ಮೊತ್ತವನ್ನು ಹೆಚ್ಚಿಸಿದರು.

ವಿರಾಟ್ ಕೊಹ್ಲಿ ಅವರ ಅಜೇಯ 77 ರನ್‌ನಲ್ಲಿ 4 ಸಿಕ್ಸರ್ ಮತ್ತು 8 ಬೌಂಡರಿಗಳಿದ್ದವು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು