ಬುಧವಾರ, ಜನವರಿ 19, 2022
24 °C

IND vs NZ Test: ಎರಡನೇ ದಿನದಾಟ ಆರಂಭಿಸಿದ ಭಾರತಕ್ಕೆ ಆಘಾತ ನೀಡಿದ ಎಜಾಜ್ ಪಟೇಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಶನಿವಾರ ಎರಡನೇ ದಿನದಾಟ ಆರಂಭಿಸಿದ ಟೀಮ್‌ ಇಂಡಿಯಾ ಆರಂಭಿಕ ಆಘಾತ ಎದುರಿಸಿದೆ.

ವೃದ್ಧಿಮಾನ್ ಸಹಾ ಮತ್ತು ಆರ್‌. ಅಶ್ವಿನ್‌ ಅವರನ್ನು ಎಡಗೈ ಸ್ಪಿನ್ನರ್ ಎಜಾಜ್ ಪಟೇಲ್ ಔಟ್‌ ಮಾಡಿ ಮಿಂಚಿದರು.

ಸದ್ಯ ಭಾರತ 86 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 260 ರನ್‌ ಗಳಿಸಿದೆ. ಅಮೋಘ ಆಟವಾಡುತ್ತಿರುವ ಮಯಂಕ್ ಅಗರವಾಲ್ ಔಟಾಗದೆ 135, ಅಕ್ಷರ್‌ ಪಟೇಲ್‌ ಔಟಾಗದೆ 22 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದಾರೆ.

ಶುಕ್ರವಾರ ಮೊದಲ ದಿನದಾಟದಲ್ಲಿ ಭಾರತ ತಂಡವು 70 ಓವರ್‌ಗಳಲ್ಲಿ 4ಕ್ಕೆ 221 ರನ್ ಗಳಿಸಿತ್ತು.

2019ರ ನವೆಂಬರ್‌ನಲ್ಲಿ ದ್ವಿಶತಕ ಬಾರಿಸಿದ ನಂತರ ಬ್ಯಾಟಿಂಗ್‌ನಲ್ಲಿ ಸತತ ವೈಫಲ್ಯ ಅನುಭವಿಸಿದ್ದ ಮಯಂಕ್ ವಾಂಖೆಡೆಯಲ್ಲಿ ಅಮೋಘ ಆಟವಾಡಿದರು. ಈ ಸರಣಿಯ ಮೊದಲ ಪಂದ್ಯದಲ್ಲಿಯೂ ಅವರು ಹೆಚ್ಚು ರನ್ ಗಳಿಸಿರಲಿಲ್ಲ. ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ಗಾಯಗೊಂಡಿರುವ ಕೆ.ಎಲ್. ರಾಹುಲ್ ತಂಡದಲ್ಲಿ ಇಲ್ಲದ ಕಾರಣಕ್ಕೆ ಸ್ಥಾನ ಪಡೆದಿದ್ದ ಮಯಂಕ್ ತಮ್ಮ ಸಾಮರ್ಥ್ಯ ಸಾಬೀತು ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು