ಶನಿವಾರ, ಜನವರಿ 28, 2023
18 °C

IND vs NZ | ಗಿಲ್, ರೋಹಿತ್ ಅಜೇಯ ಅರ್ಧಶತಕ; ಬೃಹತ್ ಮೊತ್ತದತ್ತ ಭಾರತ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಇಂದೋರ್‌: ನ್ಯೂಜಿಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯಲ್ಲಿ ಕ್ಲೀನ್‌ಸ್ವೀಪ್‌ ಸಾಧಿಸುವ ಲೆಕ್ಕಾಚಾರದಲ್ಲಿ ಕಣಕ್ಕಿಳಿದಿರುವ ಭಾರತ ತಂಡ, ಅಂತಿಮ ಪಂದ್ಯದಲ್ಲಿ ಉತ್ತಮ ಆರಂಭ ಕಂಡಿದೆ. ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿರುವ ಟೀಂ ಇಂಡಿಯಾ ಉತ್ತಮ ಆರಂಭ ಕಂಡಿದೆ.

ಇನಿಂಗ್ಸ್‌ ಆರಂಭಿಸಿರುವ ಶುಭಮನ್‌ ಗಿಲ್‌ ಹಾಗೂ ನಾಯಕ ರೋಹಿತ್ ಶರ್ಮಾ ಬಿರುಸಿನ ಬ್ಯಾಟಿಂಗ್‌ ನಡೆಸುತ್ತಿದ್ದಾರೆ. ತಂಡದ ಮೊತ್ತ 16 ಓವರ್‌ಗಳ ಅಂತ್ಯಕ್ಕೆ ವಿಕೆಟ್‌ ನಷ್ಟವಿಲ್ಲದೆ 140 ರನ್ ಆಗಿದೆ. ಗಿಲ್‌ ಕೇವಲ 45 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿ ಸಹಿತ 66 ರನ್‌ ಚಚ್ಚಿದ್ದಾರೆ. ರೋಹಿತ್‌ ಸಹ 51 ಎಸೆತಗಳಲ್ಲಿ 72 ರನ್‌ ಸಿಡಿಸಿ ಆಡುತ್ತಿದ್ದಾರೆ. ಅವರ ಬ್ಯಾಟ್‌ನಿಂದ 7 ಬೌಂಡರಿ ಮತ್ತು 5 ಸಿಕ್ಸರ್‌ ಸಿಡಿದಿವೆ.

ಇದನ್ನೂ ಓದಿ: 

ಅಂದಹಾಗೆ 22ನೇ ಇನಿಂಗ್ಸ್‌ನಲ್ಲಿ ಬ್ಯಾಟ್‌ ಬೀಸುತ್ತಿರುವ ಗಿಲ್‌ಗೆ ಇದು 6 ನೇ ಅರ್ಧಶತಕ. ಅದೇರೀತಿ ರೋಹಿತ್‌ 49 ಬಾರಿ ಅರ್ಧಶತಕ ಗಳಿಸಿದಂತಾಗಿದೆ.

ಭಾರತ ತಂಡ ಜನವರಿ 21 ಹಾಗೂ 22 ರಂದು ನಡೆದ ಮೊದಲೆರಡು ಪಂದ್ಯಗಳನ್ನು ಗೆದ್ದುಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು