ಕಾನ್ಪುರ: ಇಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಕೊನೆಯ ದಿನದಾಟದ ಭೋಜನ ವಿರಾಮಕ್ಕೆ ನ್ಯೂಜಿಲೆಂಡ್ ತಂಡವು 1 ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿದೆ.

ನಿನ್ನೆ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ ತಂಡ 1 ವಿಕೆಟ್ ನಷ್ಟಕ್ಕೆ 4 ರನ್ ಗಳಿಸಿತ್ತು. ಕ್ರೀಸ್‌ನಲ್ಲಿರುವ ಟಾಮ್ ಲ್ಯಾಥಮ್ ಮತ್ತು ವಿಲಿಯಮ್ ಸೋಮರ್‌ವಿಲ್ಲೆ ಅವರು ವಿಕೆಟ್ ಕೈಚೆಲ್ಲದಂತೆ ಜಾಗರೂಕರಾಗಿ ಆಡುತ್ತಿದ್ದಾರೆ.

ನಿನ್ನೆ ಎರಡನೇ ಇನಿಂಗ್ಸ್‌ನಲ್ಲಿ 7 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದ್ದ ಭಾರತ ತಂಡ ನ್ಯೂಜಿಲೆಂಡ್‌ಗೆ 284 ರನ್ ಗುರಿ ನೀಡಿತ್ತು ಈ ಗುರಿ ಬೆನ್ನತ್ತಿರುವ ನ್ಯೂಜಿಲೆಂಡ್‌ಗೆ ಇನ್ನೂ 205 ರನ್‌ಗಳ ಅಗತ್ಯವಿದೆ.

ಮೊದಲ ಇನಿಂಗ್ಸ್‌ನಲ್ಲಿ 3 ವಿಕೆಟ್ ಉರುಳಿಸಿದ್ದ ರವಿಚಂದ್ರನ್ ಅಶ್ವಿನ್ ಅವರು, ಎರಡನೇ ಇನಿಂಗ್ಸ್‌ನ ಆರಂಭದಲ್ಲೇ ಒಂದು ವಿಕೆಟ್ ಉರುಳಿಸುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್(418 ವಿಕೆಟ್) ಪಡೆದ ಭಾರತೀಯ ಬೌಲರ್‌ಗಳ ಸಾಲಿನಲ್ಲಿ ಮೂರನೇ ಸ್ಥಾನ ಗಳಿಸಿದ್ದರು.

ಅನಿಲ್ ಕುಂಬ್ಳೇ(619), ಕಪಿಲ್ ದೇವ್(434) ಅವರು ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.