ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ನಾಯಕ ಬಾಬರ್ ಆಜಂ ದಾಖಲೆ ಸರಿಗಟ್ಟಿದ ಶುಭಮನ್ ಗಿಲ್

Last Updated 25 ಜನವರಿ 2023, 6:37 IST
ಅಕ್ಷರ ಗಾತ್ರ

ಇಂದೋರ್: ಟೀಮ್ ಇಂಡಿಯಾದ ಭರವಸೆಯ ಆರಂಭಿಕ ಬ್ಯಾಟರ್ ಶುಭಮನ್ ಗಿಲ್, ಇಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಅಂತಿಮ ಏಕದಿನ ಪಂದ್ಯದಲ್ಲೂ ಅಮೋಘ ಶತಕ ಸಾಧನೆ ಮಾಡಿದ್ದಾರೆ.

ಈ ಮೂಲಕ ಪಾಕಿಸ್ತಾನದ ನಾಯಕ ಬಾಬರ್ ಆಜಂ ದಾಖಲೆಯನ್ನು ಸರಿಗಟ್ಟಿದ್ದಾರೆ. ಉಭಯ ರಾಷ್ಟ್ರಗಳ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಬಾಬರ್ ಜೊತೆ ಹಂಚಿಕೊಂಡಿದ್ದಾರೆ.

ಕಿವೀಸ್ ಸರಣಿಯಲ್ಲಿ ಗಿಲ್, ಒಟ್ಟು 360 ರನ್ ಗಳಿಸಿದ್ದಾರೆ. ಮೊದಲ ಪಂದ್ಯದಲ್ಲಿ ದ್ವಿಶತಕ (208) ಬಾರಿಸಿದ್ದ ಗಿಲ್, ಎರಡನೇ ಪಂದ್ಯದಲ್ಲಿ ಅಜೇಯ 40 ರನ್ ಗಳಿಸಿದ್ದರು. ಅಂತಿಮ ಏಕದಿನದಲ್ಲೂ ಶತಕ (112) ಸಾಧನೆ ಮಾಡಿದ್ದರು.

ಅತ್ತ ಬಾಬರ್, 2016ರಲ್ಲಿ ವೆಸ್ಟ್‌ಇಂಡೀಸ್ ವಿರುದ್ಧದ ಸರಣಿಯಲ್ಲಿ ಒಟ್ಟು 360 ರನ್ ಗಳಿಸಿದ್ದರು.

ಈ ಮೊದಲು ಏಕದಿನದಲ್ಲಿ ಅತಿ ವೇಗದಲ್ಲಿ 1,000 ರನ್ ಗಳಿಸಿದ ಭಾರತೀಯ ಬ್ಯಾಟರ್ (19 ಇನ್ನಿಂಗ್ಸ್) ಎಂಬ ಹೆಗ್ಗಳಿಕೆಗೂ ಗಿಲ್ ಭಾಜನರಾಗಿದ್ದರು.

ಮತ್ತೊಂದೆಡೆ ಕಿವೀಸ್ ಸರಣಿಯಲ್ಲಿ 3-0 ಅಂತರದ ಕ್ಲೀನ್ ಸ್ವೀಪ್ ಸಾಧನೆ ಮಾಡಿರುವ ಭಾರತ, ಐಸಿಸಿ ಏಕದಿನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಈ ಪಂದ್ಯದಲ್ಲಿ ಶತಕ ಸಾಧನೆ ಮಾಡಿರುವ ನಾಯಕ ರೋಹಿತ್ ಶರ್ಮಾ, ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ದಾಖಲೆ (30 ಶತಕ) ಸರಿಗಟ್ಟಿದ್ದಾರೆ.

ಶುಭಮನ್ ಗಿಲ್ ಅಂಕಿಅಂಶ:
ಪಂದ್ಯ: 21
ರನ್: 1,254
ಸರಾಸರಿ: 73.76
ಸ್ಟ್ರೈಕ್‌ರೇಟ್: 109.80
ಶತಕ: 4

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT